ಕರ್ನಾಟಕದಲ್ಲಿ ಸೆಪ್ಟೆಂಬರ್ 24ರ ತನಕ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರ ತನಕ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಜೋರಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸೋಮವಾರ ಮಧ್ಯಾಹ್ನ, ಸಂಜೆಯೂ ಮಳೆಯಾಗಿದ್ದು, ಇಂದು ಸಹ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ತಿಳಿಸಿದೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ.
ಮಂಗಳವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಕೊಡಗು, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆ ಸುರಿಯಲಿದೆ.
ಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಲಿದೆ. ಸೋಮವಾರ ಬೆಂಗಳೂರು ನಗರದಲ್ಲಿ ವಿವಿಧ ಪ್ರದೇಶಗಳಲ್ಲಿ ಸುರಿದ ಮಳೆಗೆ ರಸ್ತೆಗಳು ಜಲಾವೃತವಾಗಿದ್ದವು. ಮಂಗಳವಾರ ಬೆಳಗ್ಗೆಯೂ ಮೋಡ ಕವಿದ ವಾತಾವರಣವಿದೆ.
ಸೆಪ್ಟೆಂಬರ್ ತಿಂಗಳ ಅಂತ್ಯದ ತನಕ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ. ವಿವಿಧ ರಾಜ್ಯಗಳಲ್ಲಿ ಇನ್ನೂ 4 ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಡಿಕೆಗಿಂತ ಹೆಚ್ಚು ಮಳೆ ಸೆಪ್ಟೆಂಬರ್ ತಿಂಗಳಿನಲ್ಲಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜುಲೈ ತಿಂಗಳಿನಲ್ಲಿ ಉತ್ತಮ ಮಳೆಯಾಗಿತ್ತು. ಜುಲೈಗೆ ಹೋಲಿಕೆ ಮಾಡಿದರೆ ಆಗಸ್ಟ್‌ನಲ್ಲಿ ಮಳೆಯ ಪ್ರಮಾಣ ಕಡಿಮೆ ಇತ್ತು. ಆದರೆ ಸೆಪ್ಟೆಂಬರ್‌ನಲ್ಲಿ ವಾಯುಭಾರ ಕುಸಿತದಿಂದಾಗಿ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ.

ಪ್ರಮುಖ ಸುದ್ದಿ :-   ಏಪ್ರಿಲ್‌ 18, 19ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement