ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಆದೇಶ

posted in: ರಾಜ್ಯ | 0

ಬೆಂಗಳೂರು: ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಸರ್ಕಾರ (Karnataka Government) ಆದೇಶ ನೀಡಿದೆ. ಈ ಮೂಲಕ 4,200 ಸಾರಿಗೆ ನೌಕರರಿಗೆ ಸಚಿವ ಬಿ.ಶ್ರೀರಾಮುಲು ಸಂತಸದ ಸುದ್ದಿ ನೀಡಿದ್ದಾರೆ.
ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರನ್ನು ಮರು ನೇಮಕ ಮಾಡಲು ಸರ್ಕಾರ ಆದೇಶ ನೀಡಿದ್ದು, ಸಾರಿಗೆ ಸಚಿವರು ಹಾಗು ನೌಕರರ ನಡುವೆ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾತನಾಡಿದ ಸಚಿವ ಬಿ.ಶ್ರೀರಾಮುಲು, ಸಾರಿಗೆ ಯೂನಿಯನ್ ನಾಯಕರ ಜೊತೆ ಚರ್ಚೆ ಮಾಡಲಾಗಿದೆ. 12 ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದರು. ನಿನ್ನೆ ಮುಖ್ಯಮಂತ್ರಿಯೊಂದಿಗೆ ಚರ್ಚೆ ನಡೆಸಲಾಗಿದೆ. ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿ ತೊಂದರೆಯಾಗಬಾರದೆಂದು ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ವೇತನ ತಾರತಮ್ಯ ಬಗ್ಗೆಯೂ ಸಾರಿಗೆ ನೌಕರರ ಬೇಡಿಕೆ ಇಟ್ಟಿದ್ದರು. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆಯೂ ಮಾತಾನಾಡುವ ಯೋಚನೆ ಇದೆ. ಅವರ ಪ್ರಮುಖವಾದ ಬೇಡಿಕೆಯಾದ 4,200 ಸಾರಿಗೆ ನೌಕರರನ್ನ ಪುನರ್ ನೇಮಕದ ಬಗ್ಗೆ ತೀರ್ಮಾನ ತೆಹೆದುಕೊಳ್ಳಲಾಗಿದ್ದು, ಈ ಬಗ್ಗೆ ಮೊದಲು ಆದ್ಯತೆ ಕೊಟ್ಟು ಮರು ನೇಮಕ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ