ಅಫ್ಘನ್ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ- ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಚರ್ಚೆ: ಭಯೋತ್ಪಾದನೆ ಪ್ರಸರಣದ ಬಗ್ಗೆ ಕುರಿತು ಉಭಯ ನಾಯಕರ ಕಳವಳ

ನವದೆಹಲಿ: ತಾಲಿಬಾನ್ ಸ್ವಾಧೀನಕ್ಕೆ ಹೋದ ನಂತರದಲ್ಲಿ ಅಫ್ಘಾನಿಸ್ತಾನದಲ್ಲಿನ ಹಾಲಿ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ಚರ್ಚೆ ನಡೆಸಿದ್ದು, ಭಯೋತ್ಪಾದನೆ ಪ್ರಸರಣ ಕುರಿತು ಉಭಯ ನಾಯಕರ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮಂಗಳವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಅಫ್ಘಾನಿಸ್ತಾನದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ. ಜೊತೆಗೆ ಭಯೋತ್ಪಾದನೆ, ಮಾದಕ ದ್ರವ್ಯ ಸಾಗಾಟ, ಅಕ್ರಮ ಶಸ್ತ್ರಾಸ್ತ್ರ ಸಾಗಾಟಮತ್ತು ಮಾನವ ಕಳ್ಳಸಾಗಣೆ ಸಾಧ್ಯತೆಯ ಬಗ್ಗೆ ತಮ್ಮ ಕಳವಳವನ್ನು ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಮಾತುಕತೆಯ ಸಮಯದಲ್ಲಿ, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಹೆಚ್ಚುತ್ತಿರುವ ದ್ವಿಪಕ್ಷೀಯ ಸಹಯೋಗವನ್ನು ಉಭಯ ನಾಯಕರು ಪರಿಶೀಲಿಸಿದರು. ಈ ಪ್ರದೇಶದಲ್ಲಿ ಸ್ಥಿರತೆ ಮತ್ತು ಭದ್ರತೆಯನ್ನು ಉತ್ತೇಜಿಸುವಲ್ಲಿ ಭಾರತ-ಫ್ರಾನ್ಸ್ ಪಾಲುದಾರಿಕೆ ವಹಿಸುವ ಪ್ರಮುಖ ಪಾತ್ರಗಳನ್ನು ಪ್ರಧಾನಮಂತ್ರಿ ಕಾರ್ಯಾಲಯ ಬಿಡುಗಡೆ ಮಾಡಿದೆ.

ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್ ಮತ್ತು ಪ್ರಧಾನಿ ಮೋದಿ ಇಂಡೋ-ಪೆಸಿಫಿಕ್‌ನಲ್ಲಿ ಜಂಟಿಯಾಗಿ ಮತ್ತು ಯುರೋಪಿನೊಂದಿಗೆ ಕಾರ್ಯನಿರ್ವಹಿಸಲು ಒಪ್ಪಿಕೊಂಡಿದ್ದು, ಈ ಪ್ರದೇಶವನ್ನು ಸ್ಥಿರವಾಗಿ, ನಿಯಮಗಳ ಆಧಾರದ ಮೇಲೆ ಮತ್ತು ಯಾವುದೇ ಪ್ರಾಬಲ್ಯದಿಂದ ಮುಕ್ತವಾಗಿಡಲು ಸಹ ಮಾತಕತೆ ನಡೆಸಿದ್ದಾರೆ ಎಂದು ಭಾರತದ ಫ್ರೆಂಚ್ ರಾಯಭಾರಿ ಎಮ್ಯಾನುಯೆಲ್ ಲೆನೈನ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಕೂಡ ಈ ಕುರಿತು ಟ್ವೀಟ್ ಮಾಡಿದ್ದು, “ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಅಫ್ಘಾನಿಸ್ತಾನದ ಪರಿಸ್ಥಿತಿ ಕುರಿತು ಮಾತನಾಡಿದ್ದೇನೆ. ನಾವು ಇಂಡೋ-ಪೆಸಿಫಿಕ್ ನಲ್ಲಿ ಭಾರತ ಮತ್ತು ಫ್ರಾನ್ಸ್ ನಡುವಿನ ನಿಕಟ ಸಹಯೋಗದ ಬಗ್ಗೆಯೂ ಚರ್ಚಿಸಿದ್ದೇವೆ. ವಿಶ್ವಸಂಸ್ಥೆ ಭದ್ರತಾ ಮಂಡಳಿ ಸೇರಿದಂತೆ ಫ್ರಾನ್ಸ್‌ನೊಂದಿಗಿನ ನಮ್ಮ ಕಾರ್ಯತಂತ್ರದ ಪಾಲುದಾರಿಕೆಗೆ ನಾವು ಹೆಚ್ಚಿನ ಮೌಲ್ಯವನ್ನು ನೀಡುತ್ತೇವೆ ಎಂದು ಮೋದಿ ಹೇಳಿದ್ದಾರೆ.
ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯ ಉತ್ಸಾಹದಲ್ಲಿ ನಿಕಟ ಮತ್ತು ನಿಯಮಿತ ಸಮಾಲೋಚನೆಗಳನ್ನು ನಿರ್ವಹಿಸಲು ನಾಯಕರು ಒಪ್ಪಿಕೊಂಡರು, ಇದನ್ನು ಎರಡೂ ದೇಶಗಳು ಆಳವಾಗಿ ಪಾಲಿಸುತ್ತವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪದ ಹೊಟೇಲ್‌ ನಲ್ಲಿ ಬೆಂಕಿ ಅವಘಡ : 6 ಮಂದಿ ಸಾವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement