ಕರ್ನಾಟಕದಲ್ಲಿ ಹೊಸದಾಗಿ 818 ಜನರಿಗೆ ಕೊರೊನಾ ಸೋಂಕು; 21 ಮಂದಿ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 21) ಹೊಸದಾಗಿ 818 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇವೇಳೆ ಸೋಂಕಿನಿಂದ 21 ಜನರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 29,69,361 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,17,944 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಈವರೆಗೆ ಕೊರೊನಾದಿಂದ 37,648 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 13,741 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 359 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,44,052 ಕ್ಕೆ ಏರಿಕೆಯಾಗಿದೆ. 12,44,052 ಸೋಂಕಿತರ ಪೈಕಿ 12,20,659 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 8 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ 7,288 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 11, ಬೆಂಗಳೂರು ನಗರ 359, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 10, ಚಿತ್ರದುರ್ಗ 7, ದಕ್ಷಿಣ ಕನ್ನಡ 114, ದಾವಣಗೆರೆ 8, ಧಾರವಾಡ 6, ಗದಗ 1, ಹಾಸನ 23, ಹಾವೇರಿ 0, ಕಲಬುರಗಿ 4, ಕೊಡಗು 25, ಕೋಲಾರ 10, ಕೊಪ್ಪಳ 0, ಮಂಡ್ಯ 13, ಮೈಸೂರು 71, ರಾಯಚೂರು 0, ರಾಮನಗರ 0, ಶಿವಮೊಗ್ಗ 17, ತುಮಕೂರು 24, ಉಡುಪಿ 73, ಉತ್ತರ ಕನ್ನಡ 22, ವಿಜಯಪುರ 3, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement