ಬೆಂಗಳೂರು:ದೇವರಚಿಕ್ಕನಹಳ್ಳಿಯ ಅಪಾರ್ಟ್‌ಮೆಂಟ್​​ನಲ್ಲಿ ಬೆಂಕಿ ಅನಾಹುತ, ಇಬ್ಬರು ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮತ್ತೊಂದು ಅವಘಡ ನಡೆದಿದೆ. ಬೆಂಗಳೂರು ನಗರದ ದೇವರಚಿಕ್ಕನಹಳ್ಳಿ ಬಳಿ ಘಟನೆ ನಡೆದಿದೆ. ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ತಾಯಿ ಲಕ್ಷ್ಮೀದೇವಿ (82), ಪುತ್ರಿ ಭಾಗ್ಯ ರೇಖಾ (59) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.  210 ನೇ ಫ್ಲ್ಯಾಟ್‌ನಲ್ಲಿದ್ದ ತಾಯಿ ಹಾಗೂ ಮಗಳು ಸಜೀವದಹನ ಆಗಿದ್ದಾರೆ ಎನ್ನಲಾಗಿದೆ.

ಅಪಾರ್ಟ್ಮೆಂಟ್‍ ಒಳಗೆ ಒಂದೆರಡು ಜನ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗ್ಯಾಸ್ ಲೈನ್ ಏಕಾಏಕಿ ಬ್ಲಾಸ್ಟ್ ಆಗಿದೆ. ಹೀಗಾಗಿ ಸ್ಫೋಟದ ರಭಸಕ್ಕೆ ಬೆಂಕಿ ಇಡೀ ಅಂತಸ್ತಿಗೆ ವ್ಯಾಪಿಸಿದೆ. ಅಪಾರ್ಟ್ಮೆಂಟ್‍ ಐದು ಮಹಡಿ ಹೊಂದಿದ್ದು, ಎರಡನೇ ಮಳಿಗೆಯಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ನಂತರ ಮೂರು ಮಹಡಿಗಳಿಗೆ ಬೆಂಕಿ ವ್ಯಾಪಿಸಿದೆ.
ಸಂಜೆ 4ರ ಸುಮಾರಿಗೆ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಬೆಂಕಿ ತೀವ್ರತೆಗೆ ಫ್ಲ್ಯಾಟ್‌ನಲ್ಲಿರುವ ಎಲ್ಲ ವಸ್ತುಗಳು ಸುಟ್ಟಿದ್ದು, ಮಹಿಳೆ ಶವ ಕೂಡ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಮುಂದಾಗಿದ್ದಾರೆ. ಸ್ಥಳಕ್ಕೆ ಬೇಗೂರು ಪೊಲೀಸರು ಕೂಡ ಆಗಮಿಸಿದ್ದಾರೆ.
ಗಾಯಗೊಂಡಿರುವ ಆರು ಜನರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಆಶ್ರಿ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ಬೇಗೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಅಪಾರ್ಟ್​ಮೆಂಟ್​ನಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಫ್ಲ್ಯಾಟ್‌ನಲ್ಲಿ ಸಿಲುಕಿರುವವರನ್ನು ರಕ್ಷಿಸಲು ಹರಸಾಹಸ ಮಾಡಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರಿಂದ ರಕ್ಷಣಾ ಕಾರ್ಯ ಸಾಗಿದೆ.ಈಗ ಬೆಂಕಿಯು ಪಕ್ಕದ ಫ್ಲ್ಯಾಟ್​ಗಳಿಗೆ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement