ಯಾದಗಿರಿ: ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ನೀರು

ಯಾದಗಿರಿಯಲ್ಲಿ ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ನೀರು ಯಾದಗಿರಿ: ಯಾದಗಿರಿಯಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ ಸುರಿದಿದೆ. ರಾತ್ರಿ ಇಡೀ ಮಳೆ ಸುರಿದಿದ್ದು, ಕೆರೆಗಳು ತುಂಬಿ ನೀರು ಗ್ರಾಮಕ್ಕೆ ನುಗ್ಗಿರುವ ಘಟನೆ ಜಿಲ್ಲೆಣ ಹುಣಸಗಿಯಲ್ಲಿ ವರದಿಯಾಗಿದೆ. ಕಳೆದ ರಾತ್ರಿ ಜಿಲ್ಲೆಯಲ್ಲಿ 75. 5 ಎಂಎಂಎ ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹುಣಸಗಿ … Continued

ಹುಬ್ಬಳ್ಳಿ: ಚಿರತೆ ಹಿಡಿಯುವವರೆಗೆ ನೃಪತುಂಗ ಬೆಟ್ಟದ ಸುತ್ತಲಿನ 12 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ಹುಬ್ಬಳ್ಳಿ: ಹುಬ್ಬಳ್ಳಿ ನೃಪತುಂಗ ಬೆಟ್ಟದ ಸುತ್ತಲಿನ ಪ್ರದೇಶದಲ್ಲಿ ಕಂಡುಬಂದ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಮುಂದುವರಿದಿದ್ದು, ಬೆಟ್ಟದ ಸಮೀಪದ ಜನತಾ ಪ್ರೌಢಶಾಲೆ ಹಾಗೂ ಶಿರಡಿ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿ ನೃಪತುಂಗ ಬೆಟ್ಟದ ಸುತ್ತಮುತ್ತಲಿನ ವಿವಿಧ 12 ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ … Continued

12 ಕೋಟಿ ರೂ.ಗಳ ಕೇರಳ ಸರ್ಕಾರದ ಲಾಟರಿ ಗೆದ್ದ ಆಟೋ ಚಾಲಕ..!

ಕೊಚ್ಚಿ: ತೀವ್ರ ಊಹಾಪೋಹಗಳ ನಂತರ, ಕೇರಳದ ಎರ್ನಾಕುಲಂ ಜಿಲ್ಲೆಯ 58 ವರ್ಷದ ಆಟೋ ರಿಕ್ಷಾ ಚಾಲಕನನ್ನು ಕೇರಳ ಸರ್ಕಾರದ 12 ಕೋಟಿ ರೂಪಾಯಿಗಳ ತಿರುವೊಣಂ ಬಂಪರ್ ಲಾಟರಿಯನ್ನು ವಿಜೇತ ಎಂದು ಘೋಷಿಸಲಾಯಿತು. ಕೊಚ್ಚಿಯ ಮರಡು ನಿವಾಸಿ ಜಯಪಾಲನ್ ಪಿ. ಆರ್, ಹತ್ತಿರದ ಬ್ಯಾಂಕ್ ಶಾಖೆಯಲ್ಲಿ ಬಹುಮಾನ ವಿಜೇತ ಟಿಕೆಟ್ಟಿನ ಮೂಲ ಪ್ರತಿಯನ್ನು ಸಲ್ಲಿಸಿದ ನಂತರ ಲಾಟರಿಯ … Continued

ಭಾರತೀಯ ಜೈನ್ ಸಂಘಟನೆಯಿಂದ ಸೆ. 23ರಂದು ಕೋವಿಡ್ ಫ್ರೀ ವಿಲೇಜ್ ಕಾರ್ಯಕ್ರಮಕ್ಕೆ ಚಾಲನೆ: ಕರ್ನಾಟಕದಲ್ಲಿ 30 ಸಾವಿರ ಗ್ರಾಮಗಳ ಆಯ್ಕೆ

ಯಾದಗಿರಿ : ದೇಶದಲ್ಲಿ ವ್ಯಾಪಿಸಿರುವ ಮಹಾಮಾರಿ ಕೊರೊನಾ ರೋಗವನ್ನು ಸಂಪೂರ್ಣವಾಗಿ ಮುಕ್ತಗೊಳಿಸುವ ಉದ್ದೇಶದಿಂದ ಕರ್ನಾಟಕದ ಗ್ರಾಮೀಣ ಭಾಗದಲ್ಲಿ ‘ಕೋವಿಡ್ ಫ್ರೀ ವಿಲೇಜ್’ ಕಾರ್ಯಕ್ರಮವನ್ನು ಭಾರತೀಯ ಜೈನ್ ಸಂಘವು ಸಂಘಟಿಸಿದೆ ಎಂದು ಜಿಲ್ಲಾ ಸಂಚಾಲಕ ರಾಜೇಶ್ ಜೈನ್ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ ಕುರಿತಾಗಿ ಜಾಗೃತಿ ಮತ್ತು ಪರಿಣಾಮಕಾರಿ ಕಾರ್ಯಾಚರಣೆ ಸಂಕಲ್ಪದಿಂದ ರಾಜ್ಯಾದ್ಯಂತ … Continued

ಶರದ್ ಪವಾರ್ ಗೆ ಬ್ಯಾಕ್‌ ಸ್ಟ್ಯಾಬರ್‌ ಎಂದ ಶಿವಸೇನೆ ನಾಯಕ; ಅಘಾಡಿ ಸರ್ಕಾರದ ಬಿರುಕು ಮತ್ತಷ್ಟು ಬಯಲಿಗೆ

ಮುಂಬೈ: ಕಾಂಗ್ರೆಸ್, ಎನ್ ಸಿಪಿ ಹಾಗೂ ಶಿವಸೇನೆಯ ಮಹಾರಾಷ್ಟ್ರದ ಮಹಾ ವಿಕಾಸ ಅಘಡಿ ಸರ್ಕಾರದಲ್ಲಿ‌ (Maha Vikas Aghadi ( government ) ಎಲ್ಲವೂ ಸರಿ ಇಲ್ಲ ಎನ್ನುವುದಕ್ಕೆ ಈಗ ಮತ್ತೊಂದು ಹೇಳಿಕೆ ಹೊರಬಿದ್ದಿದೆ. ಮಾಜಿ ಕೇಂದ್ರ ಸಚಿವ ಮತ್ತು ಶಿವಸೇನಾ ನಾಯಕ ಅನಂತ್ ಗೀತೆ Anant Geete) ಅವರ ಹೇಳಿಕೆ ಮಹಾರಾಷ್ಟ್ರದ ಎಂವಿಎ ಸರ್ಕಾರದಲ್ಲಿ … Continued

ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್ ಅವಸ್ಥಿ: ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು

ನವದೆಹಲಿ: ಕರ್ನಾಟಕ ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿಯಾಗಿರುವ ರಿತುರಾಜ್‌ ಅವಸ್ಥಿ ಅವರ ಹೆಸರನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿದೆ. ದೇಶದ 13 ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿದೆ. ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎ. ಎಸ್‌. ಓಕಾ ಅವರು ಸುಪ್ರೀಂಕೋರ್ಟ್‌ಗೆ ಪದೋನ್ನತಿ ಪಡೆದ ಬಳಿಕ ನ್ಯಾಯಮೂರ್ತಿ … Continued

ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಆದೇಶ

ಬೆಂಗಳೂರು: ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಸರ್ಕಾರ (Karnataka Government) ಆದೇಶ ನೀಡಿದೆ. ಈ ಮೂಲಕ 4,200 ಸಾರಿಗೆ ನೌಕರರಿಗೆ ಸಚಿವ ಬಿ.ಶ್ರೀರಾಮುಲು ಸಂತಸದ ಸುದ್ದಿ ನೀಡಿದ್ದಾರೆ. ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರನ್ನು ಮರು ನೇಮಕ ಮಾಡಲು ಸರ್ಕಾರ ಆದೇಶ ನೀಡಿದ್ದು, ಸಾರಿಗೆ ಸಚಿವರು ಹಾಗು ನೌಕರರ ನಡುವೆ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. … Continued

ಕರ್ನಾಟಕದಲ್ಲಿ ಸೆಪ್ಟೆಂಬರ್ 24ರ ತನಕ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರ ತನಕ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಜೋರಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸೋಮವಾರ ಮಧ್ಯಾಹ್ನ, ಸಂಜೆಯೂ ಮಳೆಯಾಗಿದ್ದು, ಇಂದು ಸಹ ಮಳೆ ಮುಂದುವರೆಯಲಿದೆ … Continued

ಭಾರತದಲ್ಲಿ 26,115 ಹೊಸ ಪ್ರಕರಣಗಳು ದಾಖಲು; ಸಕ್ರಿಯ ಪ್ರಕರಣಗಳು 6 ತಿಂಗಳಲ್ಲೇ ಕಡಿಮೆ

ನವದೆಹಲಿ; ಕೊರೊನಾ ವೈರಸ್ಸಿನ 26,115 ಹೊಸ ಪ್ರಕರಣಗಳನ್ನು ಭಾರತ ದಾಖಲಿಸಿದ್ದು, ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದಾಗಿ 252 ಸಾವುಗಳು ಸಂಭವಿಸಿವೆ. ಮಂಗಳವಾರ ಕೇಂದ್ರ ಆರೋಗ್ಯ ಸಚಿವಾಲಯ ಹಂಚಿಕೊಂಡ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶವು ಒಟ್ಟು 34,469 ಚೇತರಿಕೆಗಳನ್ನು ಕಂಡಿದೆ, ಒಟ್ಟು ಚೇತರಿಕೆಯ ದರವು ಸುಮಾರು 97.75 ಶೇಕಡಾ ಮತ್ತು ಒಟ್ಟು ಚೇತರಿಕೆ 3,27,49,574 … Continued