ಬೆಂಗಳೂರು : ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರ ಟ್ವಿಟ್ಟರ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ಈ ಕುರಿತು ಸೈಬರ್ ಪೊಲೀಸರಿಗೆ ದೂರು ನೀಡಲು ನಿರಾಣಿ ಅವರು ಮುಂದಾಗಿದ್ದಾರೆ. ಅಲ್ಲದೇ ಮೋಸದ ಸಂದೇಶಗಳಿಗೆ ಬಲಿಯಾಗಬೇಡಿ ಎಂದು ಮನವಿ ಮಾಡಿದ್ದಾರೆ.
@NiraniMurugesh ಟ್ವಿಟ್ಟರ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಟ್ವಿಟರ್ಗೆ ದೂರು ನೀಡಿದ್ದೇನೆ. ನನ್ನ ಖಾತೆಯಲ್ಲಿರುವ ಯಾವುದೇ ಅವಹೇಳನಕಾರಿ ಮತ್ತು ಅಸಂಸದೀಯ ಸಂದೇಶಗಳನ್ನು ನಿರ್ಲಕ್ಷಿಸಿ ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ಯಾರೊಬ್ಬರೂ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಬಾರದೆಂದು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಈ ಹಿಂದೆಯೂ ಮುರುಗೇಶ್ ನಿರಾಣಿ ಅವರು ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಿದ್ದರು. ಇದೀಗ ಮತ್ತೆ ಹ್ಯಾಕ್ ಮಾಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ ಗಳನ್ನು ದುಷ್ಕರ್ಮಿಗಳು ಹ್ಯಾಕ್ ಮಾಡುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ