ಐದು ದಿನಗಳ ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಆರಂಭ: ಪಾಕಿಸ್ತಾನ ವಾಯು ಪ್ರದೇಶ ಬಳಸಿ ಪ್ರಯಾಣಿಸಿದ ವಿಮಾನ

ನವದೆಹಲಿ: ಮೂರು ದಿನಗಳ ಅಮೆರಿಕ ಪ್ರವಾಸಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಬುಧವಾರ) ದೆಹಲಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಟಿದ್ದಾರೆ.

ಅಫ್ಘಾನಿಸ್ತಾನ ವಾಯುಪ್ರದೇಶವನ್ನು ಬಳಸದೆ ಅನುಮತಿ ಪಡೆದು ಪಾಕಿಸ್ತಾನ ವಾಯಪ್ರದೇಶದ ಮೂಲಕ ಸಂಚಾರ ಮಾಡಿದ್ದಾರೆ.
ಅಮೆರಿಕಾ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಅಮೆರಿಕಾದ ಅಧ್ಯಕ್ಷ ಜೋ ಬಿಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭೇಟಿ ಆಗಲಿದ್ದಾರೆ. ಕ್ವಾಡ್ ರಾಷ್ಟ್ರಗಳ ನಾಯಕರ ಶೃಂಗ ಸಭೆಯಲ್ಲೂ ಅವರು ಪಾಲ್ಗೊಳ್ಳಲಿದ್ದಾರೆ.
ಭಾರತದಲ್ಲಿ ಕೊವಿಡ್ ಶುರುವಾದ ಬಳಿಕ ಇದು ಪ್ರಧಾನಿ ನರೇಂದ್ರ ಮೋದಿ ತೆರಳುತ್ತಿರುವ ಮೊದಲ ಪ್ರಮುಖ ವಿದೇಶಿ ಪ್ರವಾಸವಾಗಿದೆ. ಅಮೆರಿಕಕ್ಕೆ ತೆರಳುವ ಮುನ್ನ ಟ್ವೀಟ್ ಮಾಡಿರುವ ಮೋದಿ, ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಆಹ್ವಾನದ ಮೇರೆಗೆ ಅಮೆರಿಕಕ್ಕೆ ತೆರಳುತ್ತಿದ್ದೇನೆ. ನಮ್ಮ ಸಮಾನ ಆಸಕ್ತಿ, ಆಲೋಚನೆಗಳನ್ನು ಈ ವೇಳೆ ವಿನಿಮಯ ಮಾಡಿಕೊಳ್ಳಲಿದ್ದೇವೆ. ಜಾಗತಿಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಕಮಲಾ ಹ್ಯಾರಿಸ್ ಅವರನ್ನು ಭೇಟಿಯಾಗಲು ನಾನು ಕಾತುರನಾಗಿದ್ದೇನೆ ಎಂದು ಹೇಳಿದ್ದಾರೆ.
ನಾಳೆ ಬೆಳಿಗ್ಗೆ (ಗುರುವಾರ) ನರೇಂದ್ರ ಮೋದಿ ಅಮೆರಿಕದ ಕಂಪನಿಗಳ ಸಿಇಓ ಜೊತೆಗೆ ಸಭೆ ನಡೆಸಲಿದ್ದು, ಭಾರತದಲ್ಲಿ ಬಂಡವಾಳ ಹೂಡಿಕೆಗೆ ಆಹ್ವಾನ ನೀಡಲಿದ್ದಾರೆ.
ಬಳಿಕ ಅಮೆರಿಕಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ರನ್ನು ಭೇಟಿಯಾಗಿ ಮಾತುಕತೆ ನಡೆಸುವರು. ಕಮಲಾ ಹ್ಯಾರಿಸ್, ಭಾರತ ಮೂಲದವರು. ಹೀಗಾಗಿ ಕಮಲಾ ಹ್ಯಾರಿಸ್ ಜೊತೆಗೆ ನರೇಂದ್ರ ಮೋದಿ ಚರ್ಚೆ ನಡೆಸುವರು.
ಸೆಪ್ಟೆಂಬರ್ 24ರಂದು ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಶ್ವೇತ ಭವನಕ್ಕೆ ಭೇಟಿ ನೀಡಲಿದ್ದು, ಕ್ವಾಡ್ ರಾಷ್ಟ್ರಗಳ ನಾಯಕರ ಮೊದಲ ಮುಖಾಮುಖಿ ಸಭೆಯಲ್ಲಿ ಪಾಲ್ಗೊಳ್ಳುವರು. ಇದರಲ್ಲಿ ಕ್ವಾಡ್ ಸದಸ್ಯ ರಾಷ್ಟ್ರವಾಗಿರುವ ಅಮೆರಿಕದ ಅಧ್ಯಕ್ಷ ಜೋ ಬಿಡೆನ್, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮ್ಯಾರಿಸನ್, ಜಪಾನ್ ಪ್ರಧಾನಿ ಯೋಗಶಿಧೆ ಸುಗಾ ಪಾಲ್ಗೊಳ್ಳುವರು.
ಬಳಿಕ ಪ್ರಧಾನಿ ಮೋದಿ, ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ಜೊತೆಗೆ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಯ ಬಗ್ಗೆ ಚರ್ಚೆ ನಡೆಸಲಿದ್ದು, ಬಿಡೆನ್ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಬಿದು ಮೊದಲ ಮುಖಾಮುಖಿಯಾಗಿದೆ. ಸೆಪ್ಟೆಂಬರ್ 24ರ ರಾತ್ರಿ ಶ್ವೇತ ಭವನದಲ್ಲಿ ಕ್ವಾಡ್ ರಾಷ್ಟ್ರಗಳ ನಾಯಕರಿಗೆ ಜೋ ಬಿಡೆನ್ ಔತಣ ಕೂಟ ಏರ್ಪಡಿಸಿದ್ದಾರೆ.
ಸೆಪ್ಟಂಬರ್ 25ರಂದು ಭಾರತೀಯ ಕಾಲಮಾನ ಸಂಜೆ 6.30ಕ್ಕೆ ಪ್ರಧಾನಿ ನರೇಂದ್ರ ಮೋದಿ, ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡಲಿದ್ದು. ಮೋದಿಯೇ ಮೊದಲ ಭಾಷಣಕಾರರು. 2020ರಲ್ಲಿ ಕೊರೊನಾದ ಕಾರಣದಿಂದ ವರ್ಚುವಲ್ ಆಗಿ ನಡೆದ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಭಾರತದಿಂದಲೇ ಮಾತನಾಡಿದ್ದರು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement