ತಾಲಿಬಾನಿಗೆ ಹೋಲಿಸಿ ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ: ಜಾವೇದ್ ಅಖ್ತರ್‌ಗೆ ಲೀಗಲ್ ನೋಟಿಸ್ ಕಳುಹಿಸಿದ ಮುಂಬೈ ವಕೀಲ

ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಿರುದ್ಧ “ಸುಳ್ಳು ಮತ್ತು ಮಾನಹಾನಿಕರ” ಹೇಳಿಕೆ ನೀಡಿದ ಆರೋಪದ ಮೇಲೆ ಚಲನಚಿತ್ರ ಗೀತ ರಚನೆಕಾರ ಜಾವೇದ್ ಅಖ್ತರ್‌ ಅವರಿಗೆ ನಗರ ಮೂಲದ ವಕೀಲರು ಬುಧವಾರ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.
ವಕೀಲ, ಸಂತೋಷ್ ದುಬೆ ಅವರು, ಜಾವೇದ್‌ ಅಖ್ತರ್‌ ಅವರು ತಮ್ಮ ಹೇಳಿಕೆ ಹಿಂಪಡೆದು ಅದಕ್ಕಾಗಿ ಕ್ಷಮೆಯಾಚಿಸಬೇಕು ಎಂದು ನೋಟಿಸ್‌ನಲ್ಲಿ ಕೇಳಿದ್ದಾರೆ. ಒಂದುವೇಳೆ ನೋಟಿಸ್‌ ಸ್ವೀಕರಿಸಿದ ಏಳು ದಿನಗಳಲ್ಲಿ ತಮ್ಮ ಎಲ್ಲ ಹೇಳಿಕೆಗಳನ್ನು ಹಿಂಪಡೆಯದಿದ್ದರೆ ಹಾಗೂ ಲಿಖಿತವಾಗಿ ಕ್ಷಮೆ ಯಾಚಿಸದಿದ್ದರೆ 100 ಕೋಟಿ ರೂಪಾಯಿಗಳ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.
ಜಾವೇದ್ ಅಖ್ತರ್(76) ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಭಾರತದ ಆರ್ ಎಸ್ ಎಸ್ ಸಂಘಟನೆಯನ್ನು ಅಫ್ಘಾನಿಸ್ತಾನದ ತಾಲಿಬಾನಿಗೆ ಹೋಲಿಕೆ ಮಾಡಿ ಹೇಳಿಕೆ ನೀಡಿದ್ದರು.
ವಕೀಲರ ನೋಟಿಸ್ ನಲ್ಲಿ ಇಂತಹ ಹೇಳಿಕೆಗಳನ್ನು ನೀಡುವ ಮೂಲಕ, ಅಖ್ತರ್ ಭಾರತೀಯ ದಂಡ ಸಂಹಿತೆ ಸೆಕ್ಷನ್ 499 (ಮಾನನಷ್ಟ) ಮತ್ತು 500 (ಮಾನನಷ್ಟಕ್ಕೆ ಶಿಕ್ಷೆ) ಅಡಿಯಲ್ಲಿ ಅಪರಾಧ ಮಾಡಿದ್ದಾರೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಏಪ್ರಿಲ್‌ ತಿಂಗಳಲ್ಲಿ ದಾಖಲೆಯ ಪ್ರಮಾಣದ ಜಿಎಸ್‌ಟಿ ಸಂಗ್ರಹ ; ಕರ್ನಾಟಕಕ್ಕೆ 2ನೇ ಸ್ಥಾನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement