ಸೆಪ್ಟೆಂಬರ್ 28 ರಿಂದ ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಅವಕಾಶ

ಬೆಳಗಾವಿ: ಸೆಪ್ಟೆಂಬರ್ 28 ರಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭಕ್ತಾದಿಗಳ ದರ್ಶನಕ್ಕೆ ಅನುಮತಿ ನೀಡಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶಿಸಿದ್ದಾರೆ.

ಆದರೆ ಜಿಲ್ಲಾಧಿಕಾರಿಯವರು ಸಂಪೂರ್ಣ ನಿರ್ಬಂಧ ತೆಗೆದಿಲ್ಲ. ಅದಕ್ಕೆ 16 ಷರತ್ತನ್ನು ವಿಧಿಸಿಲಾಗಿದೆ.
ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ 17ತಿಂಗಳಿಂದ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಅವಕಾಶ ಸ್ಥಗಿತಗೊಳಿಸಲಾಗಿತ್ತು. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮ ಗುಡ್ಡದಲ್ಲಿರುವ ದೇವಸ್ಥಾನಕ್ಕೆ ಮಹಾರಾಷ್ಟ್ರದಿಂದ ಅತಿ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಮಹಾರಾಷ್ಟ್ರದಲ್ಲಿ ಎರಡನೇ ಅಲೆ ತೀವ್ರವಾಗಿ ಉಲ್ಬಣಗೊಂಡಿತ್ತು.
ಈಗ ದರ್ಶನಕ್ಕೆ ಅನುಮತಿ ನೀಡಲಾಗಿದ್ದರೂ, ಜನಸಂದಣಿ ಆಗುವಂತಹ ಉತ್ಸವ, ಜಾತ್ರೆ ಕಾರ್ಯಕ್ರಮ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಕಡ್ಡಾಯವಾಗಿ ಕೊವಿಡ್ ನಿಯಮ ಪಾಲಿಸುವಂತೆ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ.

ಇಲ್ಲಿ ಕ್ಲಿಕ್‌ ಮಾಡಿ ಆದೇಶ ನೋಡಬಹುದು.. yellamma temple darshan permission order

0 / 5. 0

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

ನಿಮ್ಮ ಕಾಮೆಂಟ್ ಬರೆಯಿರಿ

advertisement