ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; 28 ದಿನಗಳ ಬಳಿಕ ಸಂತ್ರಸ್ತೆ ಹೇಳಿಕೆ ದಾಖಲು

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತ ಯುವತಿಯ ಹೇಳಿಕೆಯನ್ನು ಬುಧವಾರ (ಸೆಪ್ಟೆಂಬರ್ 22) 2ನೇ ಜೆಎಂಎಫ್‌ ಸಿ ನ್ಯಾಯಾಧೀಶರ ಎದುರು ದಾಖಲಿಸಲಾಗಿದೆ. ಹೊರವಲಯದಲ್ಲಿ 28 ದಿನಗಳ ಹಿಂದೆ ನಡೆದ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಕೊನೆಗೂ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಪೊಲೀಸರ ಮನವೊಲಿಕೆಗೆ ತಲೆಬಾಗಿ ಇಂದು ಮುಂಬೈನಿಂದ ದಿಢೀರ್ ಎಂದು ಮೈಸೂರಿಗೆ ಧಾವಿಸಿದ ಸಂತ್ರಸ್ತೆ, ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಲಿಖಿತ ಹೇಳಿಕೆ ದಾಖಲಿಸಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರಾದ ಸಂತ್ರಸ್ತೆ, ಸಿಆರ್‌ಪಿಸಿ ಸೆಕ್ಷನ್ 164ರ ಅಡಿ ಸುದೀರ್ಘ ಎರಡು ಗಂಟೆಗಳ ಕಾಲ ತಮ್ಮ ಹೇಳಿಕೆಯನ್ನು ಲಿಖಿತ ರೂಪದಲ್ಲಿ ನೀಡಿದ್ದಾರೆ.
ಸಂತ್ರಸ್ತೆ ಹೇಳಿಕೆ ನೀಡಿದ ಪರಿಣಾಮ ಗ್ಯಾಂಗ್ ರೇಪ್ ಪ್ರಕರಣಕ್ಕೆ ಮತ್ತಷ್ಟು ಬಲ ಬಂದಿದೆ.
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್​ರೇಪ್ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳಿಗೆ ಸೆಪ್ಟೆಂಬರ್ 7ರಂದು 14 ದಿನ ನ್ಯಾಯಾಂಗ ಬಂಧನ ಆದೇಶಿಸಲಾಗಿದೆ. ಬಾಲಮಂದಿರದಲ್ಲಿರುವ ಪ್ರಕರಣದ ಓರ್ವ ಬಾಲ ಆರೋಪಿ ಹಾಗೂ ಆರೋಪಿಗಳನ್ನು ಜಡ್ಜ್ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಲಾಗಿದೆ.
ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದ 7ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದರು. ತಮಿಳುನಾಡಿನಲ್ಲಿ ಬೀಡುಬಿಟ್ಟಿದ್ದ ಮೈಸೂರು ಪೊಲೀಸರ ತಂಡ ಈ ಮೊದಲು ಬಂಧಿಸಿದ್ದ ಆರೋಪಿಗಳು ಒದಗಿಸಿದ ಮಾಹಿತಿ ಆಧರಿಸಿ 7ನೇ ಆರೋಪಿಯನ್ನು ಸೆರೆಹಿಡಿದಿದೆ.

ಪ್ರಮುಖ ಸುದ್ದಿ :-   ಸಿದ್ದರಾಮಯ್ಯಗೆ ಬ್ಲ್ಯಾಕ್‌ಮೇಲ್‌ ಮಾಡಲು ಸ್ಟಿಂಗ್ ಆಪರೇಷನ್.. ಇದ್ರಲ್ಲಿ ಕಾಂಗ್ರೆಸ್ಸಿನವರು ಇದ್ದಾರೆ: ಸಚಿವ ಯತೀಂದ್ರ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement