ಧಾರವಾಡ ಕವಲಗೇರಿಯಲ್ಲಿ ಚಿರತೆ ಪತ್ತೆಗೆ ಡ್ರೋನ್‌ ಬಳಕೆ, ಕೂಂಬಿಂಗ್‌ ಕಾರ್ಯಾಚರಣೆ

ಧಾರವಾಡ/ಹುಬ್ಬಳ್ಳಿ: ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡಿದ್ದ ಚಿರತೆ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಇದೀಗ ಡ್ರೋನ್‌ ಕ್ಯಾಮೆರಾ ಬಳಕೆ ಮಾಡುತ್ತಿದ್ದಾರೆ.ಕೂಂಬಿಂಗ್‌ ಕಾರ್ಯಾಚರಣೆ ನಡೆಯುತ್ತಿದೆ. ಇದಕ್ಕಾಗಿ ಪರಿಣಿತರು ಆಗಮಿಸಿದ್ದಾರೆ.

ಇತ್ತ ಹುಬ್ಬಳ್ಳಿ ನೃಪತುಂಗ ಬೆಟ್ಟದ ಸುತ್ತಮುತ್ತಲೂ ಕಾರ್ಯಾಚರಣೆ ಮುಂದುವರಿದೆ. ಆದರೆ ಚಿರತೆ ಮಾತ್ರ ಪತ್ತೆಯಾಗಿಲ್ಲ.
ಆದರೆ ಕವಲಗೇರಿ ಗ್ರಾಮದಲ್ಲಿ ಡ್ರೋನ್‌ ಬಳಕೆಯ ನಂತರ ಚಿರತೆ ಹೆಜ್ಜೆ ಗುರುತು ಕೂಡ ಪತ್ತೆಯಾಗಿದೆ ಎಂದು ತಿಳಿದುಬಂದಿದೆ
ಕವಲಗೇರಿಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ಚಿರತೆ ಸೆರೆಹಿಡಿಯುವುದಕ್ಕಾಗಿ ಕಾರ್ಯಾಚರಣೆ ನಡೆಸುತ್ತಿದ್ದರೂ ಅದು ಪತ್ತೆಯಾಗಿಲ್ಲ. ಆದರೆ, ಕಬ್ಬಿನ ಗದ್ದೆಯಲ್ಲಿ ಚಿರತೆಯ ಹೆಜ್ಜೆ ಗುರುತು ಮಾತ್ರ ಕಂಡು ಬಂದಿದೆ.
ನಿನ್ನೆ ತಡರಾತ್ರಿವರೆಗೂ ಚಿರತೆ ಸೆರೆ ಹಿಡಿಯುವುದಕ್ಕಾಗಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರೂ ಅದು ಪತ್ತೆಯಾಗಿರಲಿಲ್ಲ. ಇಂದು ಡ್ರೋಣ್ ಕ್ಯಾಮೆರಾ ಮೂಲಕ ಚಿರತೆ ಪತ್ತೆಗಾಗಿ ಸಿಬ್ಬಂದಿ ಮುಂದಾಗಿದೆ. ಸ್ಥಳದಲ್ಲೇ ಅರಣ್ಯ ಇಲಾಖೆಯವರು ಬೀಡು ಬಿಟ್ಟಿದ್ದು, ಕಾರ್ಯಾಚರಣೆ ಮುಂದುವರೆದಿದೆ.
ಇತ್ತ ಹುಬ್ಬಳ್ಳಿಯಲ್ಲಿಯೂ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದಿದೆ. ಆದರೆ ಸಣ್ಣ ಸುಳಿವು ಸಿಗುತ್ತಿಲ್ಲ. ಮೂರು ದಿನಗಳ ಹಿಂದೆ ರಾತ್ರಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಬಿಟ್ಟರೆ ಮತ್ತೇನೂ ಕುರುಹು ಸಿಕ್ಕಿಲ್ಲ. ಹುಬ್ಬಳ್ಳಿ ನೃಪತುಂಗ ಬೆಟ್ಟದ ಸುತ್ತಲಿನ ಹನ್ನೆರಡು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರಲ್ಲಿ 'ಸಿಮ್ ಬಾಕ್ಸ್' ಜಾಲ ಪತ್ತೆ ; ನಾಲ್ವರ ಬಂಧನ, 320 ಸಿಮ್‌ ಕನೆಕ್ಷನ್‌ ಸಾಮರ್ಥ್ಯದ 10 ಸಾಧನ ವಶ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement