ಪಿಎಂ ಕೇರ್ಸ್ ಫಂಡ್ ಭಾರತ ಸರ್ಕಾರದ ನಿಧಿಯಲ್ಲ: ದೆಹಲಿ ಹೈಕೋರ್ಟಿಗೆ ಮಾಹಿತಿ ನೀಡಿದ ಕೇಂದ್ರ

ನವದೆಹಲಿ : ಪಿಎಂ ಕೇರ್ಸ್ ಫಂಡ್ ಭಾರತ ಸರ್ಕಾರದ ನಿಧಿಯಲ್ಲ, ಇದರಿಂದ ಸಂಗ್ರಹವಾದ ಹಣ ಭಾರತದ ಏಕೀಕೃತ ನಿಧಿಗೆ ಹೋಗುವುದಿಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟಿಗೆ ಮಾಹಿತಿ ನೀಡಿದೆ.
ಇದು ಕಾನೂನಿನ ಅಡಿಯಲ್ಲಿ ಒಂದು ಚಾರಿಟಬಲ್ ಟ್ರಸ್ಟ್ ಆಗಿದ್ದು, ಈ ಟ್ರಸ್ಟ್ʼನ ಫಂಡ್ ಭಾರತ ಸರ್ಕಾರದ ನಿಧಿಯಲ್ಲ. ಅದರ ಮೊತ್ತವು ಭಾರತದ ಏಕೀಕೃತ ನಿಧಿಗೆ (Consolidated Fund of India) ಹೋಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ʼಗೆ ನೀಡಿದ ಮಾಹಿತಿಯಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.
ಪಿಎಂ ಕೇರ್ ಟ್ರಸ್ಟ್ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸುತ್ತಿದೆ. ಕಂಟ್ರೋಲರ್ ಮತ್ತು ಅಡಿಟರ್ ಜನರಲ್ ಆಫ್ ಇಂಡಿಯಾದ ಪ್ಯಾನಲ್ ನಿಂದ ಬಂದ ಲೆಕ್ಕಪರಿಶೋಧಕರು ಇಲ್ಲಿಗೆ ಬಂದ ಹಣವನ್ನು ಪರಿಶೀಲನೆಯನ್ನು ನಡೆಸುತ್ತಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯದ ಅಧೀನ ಕಾರ್ಯದರ್ಶಿ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್ಟಿನಲ್ಲಿ ತಿಳಿಸಿದ್ದಾರೆ.
ಪಿಎಂ ಕೇರ್ಸ್ ನಿಧಿಯ ಕಾರ್ಯವೈಖರಿಯಲ್ಲಿ ಪಾರದರ್ಶಕತೆ ಖಚಿತಪಡಿಸಿಕೊಳ್ಳಲು ಸಂವಿಧಾನದ ಅಡಿಯಲ್ಲಿ ಪಿಎಂ ಕೇರ್ಸ್ ನಿಧಿ ರಾಜ್ಯದ್ದು ಎಂದು ಘೋಷಿಸಲು ನಿರ್ದೇಶನ ನೀಡುವಂತೆ ಕೋರಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ಡಿ. ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರಿದ್ದ ನ್ಯಾಯಪೀಠವು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 27 ಕ್ಕೆ ನಿಗದಿಪಡಿಸಿದೆ.

ಪ್ರಮುಖ ಸುದ್ದಿ :-   ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ ನಾಡಗೀತೆ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ; ದಶಕಗಳ ಸಮಸ್ಯೆಗೆ ತೆರೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement