ಬೆಂಗಳೂರಿನಲ್ಲಿ ಮತ್ತೊಂದು ದುರಂತ : ಸಿಲಿಂಡರ್ ಸ್ಫೋಟಕ್ಕೆ ಮೂವರು ಸಾವು, ಹಲವರಿಗೆ ಗಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮತ್ತೊಂದು ದುರಂತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಹತ್ತಾರು ಬೈಕ್ ಗಳು ಸುಟ್ಟು ಕರಕಲಾಗಿವೆ. ಈ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ನ್ಯೂ ತಗರುಪೇಟೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಸ್ಫೋಟಕ್ಕೆ ಹಲವರಿಗೆ ಗಾಯಗಳಾಗಿದ್ದು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿವೆ.
ಪೊಲೀಸ್ ಬರುವಷ್ಟರಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಿದ್ದಾರೆ. ಸುತ್ತಮುತ್ತಲಿನ ಸುಮಾರು 100 ಮೀಟರ್ ದೂರದ ವರೆಗೆ ಶಬ್ದ ಕೇಳಿದೆ. ಭಯದಿಂದ ಸ್ಥಳೀಯರು ಮನೆಯಿಂದ ಹೊರಬಂದು ನೋಡಿದ್ದಾರೆ. ಸ್ಫೋಟದ ತೀವ್ರತೆಗೆ ನಾಲ್ಕೈದು ಮೀಟರ್ ದೂರಕ್ಕೆ ದೇಹಗಳು ಹಾರಿಬಿದ್ದಿವೆ.‌ ಮೂವರ ದೇಹಗಳು ಗೋದಾಮಿನಿಂದ ಹೊರಗೆ ಹಾರಿಬಿದ್ದಿವೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಬೈಕ್​​ಗಳು ಸುಟ್ಟು ಕರಕಲಾಗಿರುವ ವರದಿಯಾಗಿದೆ. ಅಕ್ಕಪಕ್ಕದ ಮನೆಗಳಲ್ಲಿದ್ದವರಿಗೂ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಗಳ ಕಿಟಕಿ ಗಾಜು ಪುಡಿಪುಡಿಯಾಗಿವೆ.
ಮಧ್ಯಾಹ್ನ 12.10ರ ಸುಮಾರಿಗೆ ದುರಂತ ಸಂಭವಿಸಿದೆ. ನಾನು ಸ್ಥಳಕ್ಕೆ ಹೋದಾಗ ದಟ್ಟವಾದ ಹೊಗೆ ಆವರಿಸಿತ್ತು. ಪಂಕ್ಚರ್​ ಅಂಗಡಿಯಲ್ಲಿದ್ದ ಕಂಪ್ರೆಸರ್​ ಸ್ಫೋಟದ ಶಂಕೆ ವ್ಯಕ್ತವಾಗಿದೆ.
ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದೆ. ಸದ್ಯ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸುತ್ತಿದ್ದಾರೆ. ದಕ್ಷಿಣ ವಿಭಾಗದ ಡಿಸಿಪಿ ಹರಿಶ್ ಪಾಂಡೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ

ಪ್ರಮುಖ ಸುದ್ದಿ :-   ಧರ್ಮಸ್ಥಳ ಪ್ರಕರಣ; ಚಿನ್ನಯ್ಯ ನನಗೆ ಕರೆ ಮಾಡಿದ್ದ, ಆದರೆ ಎಸ್‌ಐಟಿ ಸಂಪರ್ಕಿಸಲು ಹೇಳಿದ್ದೆ- ನಟ ಪ್ರಕಾಶ್ ರಾಜ

1 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement