ಮಹಾರಾಷ್ಟ್ರ: 15 ವರ್ಷದ ಬಾಲಕಿ ಮೇಲೆ 8 ತಿಂಗಳಿಂದ ಇಬ್ಬರು ಅಪ್ರಾಪ್ತರು ಸೇರಿ 29 ಜನರಿಂದ ಅತ್ಯಾಚಾರ..!

ಪುಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಕಳೆದ 8 ತಿಂಗಳಿಂದ 15 ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ 29 ಜನರು ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಬಾಲಕಿಯ ದೂರಿನ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, 22 ಆರೋಪಿಗಳನ್ನು ಬಂಧಿಸಲಾಗಿದೆ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಆರೋಪಿಗಳನ್ನು ಕಸ್ಟಿಡಿಗೆ ಪಡೆಯಲು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ” ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕಲ್ಯಾಣ್ ವಿಭಾಗ) ದತ್ತಾತ್ರಯ್ ಕರಾಳೆ ಹೇಳಿದರು. ಪೊಲೀಸರ ಪ್ರಕಾರ, 9 ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿಯನ್ನು ಅಪ್ರಾಪ್ತ ವಯಸ್ಸಿನ ಆಕೆಯ ಸ್ನೇಹಿತ ಜನವರಿಯಲ್ಲಿ ಅತ್ಯಾಚಾರ ಮಾಡಿದ್ದಾನೆ.
ಆರೋಪಿಗಳು ಈ ಕೃತ್ಯವನ್ನು ತಮ್ಮ ಮೊಬೈಲ್ ಫೋನಿನಲ್ಲಿ ರೆಕಾರ್ಡ್ ಮಾಡಿದ್ದಾರೆ ಮತ್ತು ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಆತನ ಸ್ನೇಹಿತರು ಡೊಂಬಿವ್ಲಿ, ಬದ್ಲಾಪುರ, ಮುರ್ಬಾದ್ ಮತ್ತು ರಬಾಲೆಯಂತಹ ವಿವಿಧ ಸ್ಥಳಗಳಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಸಂತ್ರಸ್ತೆ ಎಫ್‌ಐಆರ್‌ನಲ್ಲಿ ಒಟ್ಟು 33 ಜನರನ್ನು ಹೆಸರಿಸಿದ್ದಾರೆ ಮತ್ತು ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಎಲ್ಲಾ ಆರೋಪಿಗಳು 16 ರಿಂದ 23 ವರ್ಷದೊಳಗಿನವರು ಎಂದು ಪೊಲೀಸರು ತಿಳಿಸಿದ್ದಾರೆ.
ವಾಣಿಜ್ಯ ನಗರಿ ಮುಂಬೈನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ. 15 ವರ್ಷದ ಹುಡುಗಿಯ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ 29 ಜನ ಕೀಚಕರು ಕಳೆದ 9 ತಿಂಗಳಿನಿಂದ ಸತತವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement