ಮುಂದಿನ ವರ್ಷದ ನವೆಂಬರ್ 2ರಿಂದ ಬೆಂಗಳೂರಿನಲ್ಲಿ ಹೂಡಿಕೆದಾರರ ಸಮಾವೇಶ; ಸಚಿವ ನಿರಾಣಿ

ಬೆಂಗಳೂರು: 2022ರ ನವೆಂಬರ್ 2ರಿಂದ ನವೆಂಬರ್ ತಿಂಗಳ 2ರಿಂದ 4ರ ವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಧಾನಸಭೆಯಲ್ಲಿ ಇಂದು (ಶುಕ್ರವಾರ)ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಪ್ರಿಯಾಂಕ ಖರ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ 2022ರ ನವೆಂಬರ್ 2ರಿಂದ ನವೆಂಬರ್ 2ರಿಂದ ಮೂರು ದಿನಗಳ ಕಾಲ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಮತ್ತೊಮ್ಮೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ಯಾದಗಿರಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಔಷಧಿ ಕಾರ್ಖಾನೆಯನ್ನು ತೆರೆಯಲು ತೀರ್ಮಾನಿಸಲಾಗಿದೆ. ಇದಕ್ಕೆ ಕೇಂದ್ರ ಸರ್ಕಾರ 1000 ಕೋಟಿ ರೂ. ಅನುದಾನವನ್ನು ನೀಡುತ್ತದೆ. ಇದಕ್ಕಾಗಿ ಮೂರು ರಾಜ್ಯಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇದರಲ್ಲಿ ಕರ್ನಾಟಕವೂ ಸಹ ಆರ್ಥಿಕ ನೆರವು ಪಡೆಯಲಿದೆ ಎಂದು ತಿಳಿಸಿದರು.
ಯಾದಗಿರಿ ಜಿಲ್ಲೆ ಕಡೆಚೂರು ಮತ್ತು ಬಾಡಿಯಾಳ ಗ್ರಾಮದಲ್ಲಿ 3232 ಹಾಗೂ 3282 ಎಕರೆ ಜಮೀನನ್ನು ಭೂ ಸ್ವಾಧೀನ ಮಾಡಿಕೊಳ್ಳಲಾಯಿತು. ಇದರಲ್ಲಿ 1600 ಎಕರೆ ಜಮೀನನ್ನು ಅಭಿವೃದ್ಧಿಪಡಿಸಿ ಉದ್ಯಮಿಗಳಿಗೆ ಹಂಚಿಕೆ ಮಾಡಲಾಗಿದೆ. ಕರ್ನಾಟಕದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಚೆನ್ನೈ-ಮುಂಬೈ ಕೈಗಾರಿಕಾ ಕಾರಿಡಾರ್ ತುಮಕೂರು, ಬೆಂಗಳೂರು, ಮುಂಬೈ, ಆರ್ಥಿಕ ಕಾರಿಡಾರ್, ಹೈದರಾಬಾದ್-ಬೆಂಗಳೂರು ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ ಪ್ರಶ್ನೆಗೆ ಉತ್ತರಿಸಿದ ಸಚಿವ ನಿರಾಣಿ, ಕೈಗಾರಿಕಾ ಪ್ರದೇಶಾಭಿವೃದ್ಧಿ ವತಿಯಿಂದ ಬೀದರ್ ಜಿಲ್ಲೆಯಲ್ಲಿ 1096.55 ಎಕರೆ ಜಮೀನನ್ನು ಕೈಗಾರಿಕಾ ಉದ್ದೇಶಕ್ಕಾಗಿ ಅಭಿವೃದ್ಧಿಪಡಿಸಲಾಗಿದೆ. ಈ ಪೈಕಿ 1432.33 ಎಕರೆ ಜಮೀನನ್ನು 1392 ಘಟಕಗಳಿಗೆ ಹಂಚಿಕೆ ಮಾಡಲಾಗಿದೆ. 1150 ಎಕರೆ ಜಮೀನನ್ನು ನಾಲ್ಕು ಯೋಜನೆಗಳಿಗೆ ಕಾಯ್ದಿರಿಸಲಾಗಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಕೈಗಾರಿಕಾ ಬಳಕೆಗೆ 0.48 ಜಮೀನು ಬಳಸಿಕೊಳ್ಳುತ್ತಿದ್ದೇವೆ. ಇದರ ಪ್ರಮಾಣ ಮತ್ತಷ್ಟು ಹೆಚ್ಚಾಗಬೇಕಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement