ಕರ್ನಾಟಕದಲ್ಲಿ ಕೊರೊನಾ ಏರಿಳಿತ: ಶನಿವಾರ 787 ಪ್ರಕರಣ ಪತ್ತೆ..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ (ಶನಿವಾರ) 787 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,72, 620ಕ್ಕೆ ಏರಿಕೆಯಾಗಿದೆ.
ಇಂದು 11 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ ಸಾವಿನ ಸಂಖ್ಯೆ 37,717ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 775 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,21,567ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 13,307 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು 276 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.55ಕ್ಕೆ ಇಳಿದಿದೆ.

0 / 5. 0

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement