ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ನಾಲ್ಕು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕೆಲವು ದಿನಗಳಿಂದ ಕೊಂಚ ರಾಜ್ಯದ ಹಲವೆಡೆ ಬಿಡುವು ನೀಡಿದ್ದ ಮುಂಗಾರು ಮತ್ತೆ ಚುರುಕಾಗಿದ್ದು, ಮುಂದಿನ ಕೆಲ ದಿನ ಮಳೆಯಾಗುವ(Rainfall) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದೆ.
ವಿಶೇಷವಾಗಿ, ಕರಾವಳಿ(Coastal Karnataka) ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 28ರ ವರೆಗೂ ಮಳೆಯಾಗಲಿದೆ. ಮುಖ್ಯವಾಗಿ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಇಂದು (ಶನಿವಾರ)ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು, ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್‌, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ, ರಾಯಚೂರು, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಮಳೆಯಾಗುವ ನಿರೀಕ್ಷೆಯಿದೆ, ಹಾಗೂ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಮುಖ ಸುದ್ದಿ :-   ಕುಮಟಾ: ಭಾರಿ ಮಳೆಗೆ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement