ವಲಸೆ ಕಾರ್ಮಿಕರ ಅನುಕೂಲಕ್ಕೆಂದು 7 ಕಡೆ ವಸತಿ ರಹಿತರ ಆಶ್ರಯ ಕೇಂದ್ರ ನಿರ್ಮಾಣ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಅವಳಿ ನಗರದಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಅಡಿ ಏಳು ನಗರ ವಸತಿ ರಹಿತರ ಆಶ್ರಯ ಕೇಂದ್ರಗಳನ್ನು ನಿರ್ಮಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದ ಹೊಸೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನಗರ ವಸತಿ ರಹಿತರ ಆಶ್ರಯ ಕೇಂದ್ರವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಉಂಟಾದ ವಲಸೆ ಕಾರ್ಮಿಕ ಸಮಸ್ಯೆಯನ್ನು ನಿವಾರಿಸಲು ಆಶ್ರಯ ಕೇಂದ್ರಗಳು ಅನುಕೂಲವಾಗಲಿವೆ. ಆಶ್ರಯ ಕೇಂದ್ರದಲ್ಲಿ ಗರಿಷ್ಠ 6 ತಿಂಗಳ ವರೆಗೆ ವಲಸೆ ಕಾರ್ಮಿಕರಿಗೆ ಊಟದೊಂದಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು.
ನಗರದಲ್ಲಿ ಕೈಗೊಳ್ಳಲಾದ ಸಮೀಕ್ಷೆಯಲ್ಲಿ ಕಾರ್ಮಿಕರು ಆಶ್ರಯ ಕೇಂದ್ರದಲ್ಲಿ ಉಳಿದುಕೊಳ್ಳಲು ಹಲವರು ಒಲವು ತೋರಿಸಿದ್ದಾರೆ. ಈಗ ಉದ್ಘಾಟಿಸಿದ ಆಶ್ರಯ ಕೇಂದ್ರ ನಿರ್ವಹಣೆ ಹೊಣೆಯನ್ನು ಖಾಸಗಿಯವರಿಗೆ ನೀಡಲಾಗಿದೆ. ಈ ಕೇಂದ್ರದಲ್ಲಿ ಒಬ್ಬ ವ್ಯವಸ್ಥಾಪಕರು, ಮೂವರು ಆರೈಕೆ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. 23 ಜನರಿಗೆ ಆಶ್ರಯ ನೀಡಲಾಗುವುದು ಎಂದರು.
ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಜಿಲ್ಲಾ ಕೌಶ್ಯಲ್ಯ ಅಭಿವೃದ್ಧಿ ಅಧಿಕಾರಿ ಡಾ.ಚಂದ್ರಪ್ಪ, ಅಬ್ದುಲ್ ರಜಾಕ್ ಗಡವಾಲೆ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement