ಚಾಮರಾಜನಗರ: ಜಾನುವಾರುಗಳ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಚಾಮರಾಜನಗರ: ತಾಲೂಕಿನ ವೀರನಪುರ ಬಳಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದು ಜನರಿಗೆ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದೆ. ಹೀಗಾಗಿ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.
ಕಳೆದ ದಿನಗಳಿಂದ ಚಿರತೆಯು ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಚಿರತೆ ಹಾವಳಿ ತಡೆಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು. ಕಳೆದ ನಾಲ್ಕು ದಿನಗಳ ಹಿಂದೆ ಅಧಿಕಾರಿಗಳು ಚಿರತೆ ಸೆರೆಗೆ ಬೋನ್‌ ಇರಿಸಿ ಅದನ್ನು ಸೆರೆ ಹಿಡಿಯಲು ಪ್ರಯತ್ನ ನಡೆಸಿದ್ದರು. ನಾಲ್ಕು ದಿನಗಳ ಅರಣ್ಯ ಇಲಾಖೆ ಪ್ರಯತ್ನ ಕೊನೆಗೂ ಫಲಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ, ಜನರು ನಿಟ್ಟುಸಿರು ಬಿಡುವಂತಾಗಿದೆ.

0 / 5. 0

ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement