ಬಂಗಾಳಕೊಲ್ಲಿಯಲ್ಲಿ ಗುಲಾಬ್‌ ಚಂಡಮಾರುತದ ಪರಿಣಾಮ : ಕರ್ನಾಟಕದಲ್ಲಿಯೂ ಇಂದಿನಿಂದ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಅದು ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಹಾಗೂ ಒರಿಸ್ಸಾದಲ್ಲಿ ಗುಲಾಬ್‌ ಚಂಡಮಾರುತದ ಭೀತಿ ಎದುರಾಗಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.
ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ.
ಅಲ್ಲದೇ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಗುಲಾಬ್‌ ಚಂಡಮಾರುತದ ಪರಿಣಾಮ ಉತ್ತರ ಒಳನಾಡಿನ ಹಾವೇರಿ, ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಇಂದಿನಿಂದ ಸೆ. 28ರ ವರೆಗೂ ಮಳೆಯಾಗಲಿದೆ. ಕರಾವಳಿ ಸೇರಿದಂತೆ ರಾಜ್ಯ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಣೆಯನ್ನು ಮಾಡಲಾಗಿದೆ.
ಗುಲಾಬ್‌ ಚಂಡಮಾರುತದ ಆರ್ಭಟದಿಂದಾಗಿ ಆಂಧ್ರಪ್ರದೇಶದ, ಒರಿಸ್ಸಾ ಹಾಗೂ ಗುಜರಾತ್‌ ರಾಜ್ಯದಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ತಮಿಳುನಾಡು, ಹಿಮಾಚಲ ಪ್ರದೇಶ, ರಾಜಸ್ಥಾನ, ಪಂಚಾಜ್‌, ಹರಿಯಾಣ, ಗೋವಾ, ಮಧ್ಯಪ್ರದೇಶ, ಉತ್ತರಾಖಂಡ್‌, ತ್ರಿಪುರ, ಕೇರಳ, ತೆಲಂಗಾಣ, ಬಿಹಾರ, ಅಸ್ಸಾಂ, ಮೇಘಾಲಯ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿಯೂ ವರುಣ ಆರ್ಭಟಿಸಲಿದ್ದಾನೆ ಎಂದು ಮುನ್ಸೂಚನೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement