ಶಾಲಾ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ ನೀಡಿದ ಶಿಕ್ಷಣ ಸಚಿವ ನಾಗೇಶ

ಬೆಂಗಳೂರು:ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಮುಚ್ಚಿದ ಶಾಲೆಯ ಬಾಗಿಲು ತೆರೆದಿದೆ. ಪೂರ್ಣ ಪ್ರಮಾಣದಲ್ಲಿ ಶಾಲಾ ಆರಂಭ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಶಾಲಾ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಒಳ್ಳೆಯ ಸುದ್ದಿ ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಮರುಚಾಲನೆ ನೀಡಲು ಚಿಂತನೆ ನಡೆದಿದೆ. ಈ ಸಂಬಂಧ ಶೀಘ್ರದಲ್ಲೇ ನಿರ್ಣಯ ತೆಗೆದುಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಸಾರ್ವಜನಿಕ ನಿರ್ದೇಶನಾ ಇಲಾಖೆಯು ಮಧ್ಯಾಹ್ನದ ಬಿಸಿಯೂಟವನ್ನು ರದ್ದು ಮಾಡಿತ್ತು. ಸದ್ಯದ ಮಟ್ಟಿಗೆ ಬಿಸಿಯೂಟದ ಬದಲಿಗೆ ಮಕ್ಕಳಿಗೆ ರೇಷನ್ ಅನ್ನು ಶಾಲೆಗಳಲ್ಲಿ ಪೂರೈಸಲಾಗುತ್ತಿದೆ. ಮಧ್ಯಾಹ್ನದ ಬಿಸಿಯೂಟವನ್ನು ಮರು ಆರಂಭಿಸಲು ಮಕ್ಕಳು, ಪೋಷಕರು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಯಿಂದ ಆಗ್ರಹಗಳು ಬರುತ್ತಿವೆ. ನಾನು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದೇನೆ. ಮನೆಯಿಂದ ಊಟ ತರುತ್ತಿರುವುದಾಗಿ ಮಕ್ಕಳು ಹೇಳುತ್ತಿದ್ದಾರೆ. ಆದರೆ ನಾವು ಅವರಿಗೆ ಶಾಲೆಯಲ್ಲೇ ಮಧ್ಯಾಹ್ನದ ಊಟ ನೀಡಲು ಶೀಘ್ರವೇ ಆರಂಭಿಸಲಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ನಾಪತ್ತೆಯಾಗಿದ್ದ ಗದಗ ಕೆಆರ್‌ಐಡಿಎಲ್ ಎಇಇ 40 ದಿನಗಳ ನಂತರ ಮುಂಬೈನಲ್ಲಿ ಪತ್ತೆ

3.5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement