ನವದೆಹಲಿ: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಆದಾಗ್ಯೂ, ಅವರು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.
ನವಜೋತ್ ಸಿಂಗ್ ಸಿಧು ಅವರು ಟ್ವಿಟ್ಟರ್ ನಲ್ಲಿ ತಮ್ಮ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದ ಪತ್ರವನ್ನು ಪೋಸ್ಟ್ ಮಾಡಿದ್ದಾರೆ.
ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ, ನಾನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ನವಜೋತ್ ಸಿಂಗ್ ಸಿಧು ಅವರ ದಿಢೀರ್ ರಾಜೀನಾಮೆಯು ಕಳೆದ ಕೆಲವು ವಾರಗಳಿಂದ ಪಂಜಾಬ್‌ನಲ್ಲಿನ ನಾಟಕೀಯ ಬೆಳವಣಿಗೆಗಳ ಸರಣಿಯ ಇತ್ತೀಚಿನ ನವೀಕರಣವಾಗಿದೆ.
ನವಜೋತ್ ಸಿಂಗ್ ಸಿಧು ಮತ್ತು ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ನಡುವಿನ ಅಂತಃಕಲಹದ ಉತ್ತುಂಗಕ್ಕೇರಿದ ನಂತರ ಅಮರಿಂದರ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು ಹಾಗೂ ಅವರ ಬದಲಿಗೆ ಚರಣ್ಜಿತ್ ಸಿಂಗ್ ಚನ್ನಿ ಅವರನ್ನು ಪಂಜಾಬ್ ಮುಖ್ಯಮಂತ್ರಿಯಾಗಿ ಸೆಪ್ಟೆಂಬರ್ 20 ರಂದು ನೇಮಿಸಲಾಯಿತು. ಕ್ಯಾಬಿನೆಟ್ ಅಂತಿಮಗೊಳಿಸುವ ಮೊದಲು ಪಕ್ಷದ ಹೈಕಮಾಂಡ್ ಜೊತೆಗೆ ಸುದೀರ್ಘ ಸಭೆಗಳು ನಡೆದವು.
ಈ ಸುದೀರ್ಘ ಸಭೆಗಳ ನಂತರವೂ, ಕ್ಯಾಬಿನೆಟ್ ಮಂತ್ರಿಗಳ ಅಂತಿಮ ಪಟ್ಟಿಯಿಂದ ಅನೇಕರು ಅಸಂತೋಷಿತರಾದರು. ಗಣಿಗಾರಿಕೆ ಹಗರಣ’ದಲ್ಲಿ ಆರೋಪಿಯಾಘಿರುವ ರಾಣಾ ಗುರ್ಜಿತ್ ಸಿಂಗ್ ಅವರನ್ನು ಪ್ರಸ್ತಾಪಿತ ಕ್ಯಾಬಿನೆಟ್ ಪಟ್ಟಿಯಿಂದ ತೆಗೆದುಹಾಕುವಂತೆ ದೋಬಾದ ಆರು ಕಾಂಗ್ರೆಸ್ ಶಾಸಕರು ಮತ್ತು ಒಬ್ಬ ಪಂಜಾಬ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ನವಜೋತ್ ಸಿಂಗ್ ಸಿಧು ಒತ್ತಾಯಿಸಿದರು ಮತ್ತು ಬದಲಾಗಿ ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಸ್ವಚ್ಛ ದಲಿತ ಮುಖವನ್ನು ಸೇರಿಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದರು.
ಆದರೆ, ಈ ದೂರುಗಳ ನಡುವೆಯೂ ರಾಣಾ ಗುರ್ಜೀತ್ ಸಿಂಗ್ ಭಾನುವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಮೂಲಗಳ ಪ್ರಕಾರ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ದಿನವೇ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ