ಆತ ಸ್ಥಿರ ಮನುಷ್ಯನಲ್ಲ ಎಂದು ನಾನು ನಿನಗೆ ಹೇಳಿದ್ದೆ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ ನಂತರ ಅಮರಿಂದರ್‌ ಹೇಳಿಕೆ

ನವದೆಹಲಿ: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನವಜೋತ್ ಸಿಂಗ್ ಸಿಧು (Navjot Singh Sidhu) ಅವರನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ (Captain Amarinder Singh) “ಅವರು ಸ್ಥಿರ ಮನುಷ್ಯನಲ್ಲ” ಎಂದು ಹೇಳಿದ್ದಾರೆ.
ಆತ ಸ್ಥಿರ ಮನುಷ್ಯನಲ್ಲ ಮತ್ತು ಗಡಿ ರಾಜ್ಯ ಪಂಜಾಬ್‌ಗೆ ಸರಿಹೊಂದುವುದಿಲ್ಲ ಎಂದು ನಾನು ನಿಮಗೆ (ಹೈಕಮಾಂಡ್‌) ಹೇಳಿದ್ದೇನೆ ಎಂದು ಅಮರಿಂದರ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ, ಪಂಜಾಬ್‌ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ನವಜೋತ್ ಸಿಧು ತಿಳಿಸಿದ್ದು, ಪಕ್ಷದಲ್ಲಿ ಮುಂದುವರಿಯುವುದಾಗಿ ಹೇಳಿದ್ದಾರೆ. ಸಿದ್ದು ಈ ವರ್ಷದ ಜುಲೈನಲ್ಲಿ ರಾಜ್ಯ ಪಕ್ಷದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.
ಆದ್ದರಿಂದ, ನಾನು ಈ ಮೂಲಕ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಕಾಂಗ್ರೆಸ್ ಸೇವೆ ಮುಂದುವರಿಸುತ್ತೇನೆ ಎಂದು ಅವರು ಬರೆದಿದ್ದಾರೆ.
ಅಮರಿಂದರ್ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂಬ ಊಹಾಪೋಹಗಳ ನಡುವೆ ಈ ಬೆಳವಣಿಗೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಆದರೆ, ಅಮರೀಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ರವೀಣ್ ತುಕ್ರಾಲ್, ಅಮರಿಂದರ್ ಸಿಂಗ್ ಅವರು ದೆಹಲಿಗೆ ವೈಯಕ್ತಿಕ ಭೇಟಿಯಲ್ಲಿದ್ದರು.ಅವರು ಕೆಲವು ಸ್ನೇಹಿತರನ್ನು ಭೇಟಿ ಮಾಡುತ್ತಾರೆ ಮತ್ತು ಹೊಸ ಮುಖ್ಯಮಂತ್ರಿಗಾಗಿ ಕಪುರ್ತಲಾ ಮನೆಯನ್ನು ಖಾಲಿ ಮಾಡುತ್ತಾರೆ. ಯಾವುದೇ ಅನಗತ್ಯ ಊಹಾಪೋಹಗಳು ಬೇಡ ಎಂದು ರವೀನ್ ತುಕ್ರಾಲ್ ಹೇಳಿದ್ದಾರೆ.
ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಅವರು ರಾಜ್ಯ ಪಕ್ಷದ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರೊಂದಿಗಿನ ಸುದೀರ್ಘವಾದ ಅಧಿಕಾರದ ಜಗಳದ ನಂತರ ವಿಧಾನಸಭಾ ಚುನಾವಣೆಗೆ ಐದು ತಿಂಗಳಿಗಿಂತ ಮೊದಲೇ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕಳೆದ ವಾರ ರಾಜೀನಾಮೆ ನೀಡಿದರು. ಅವರ ಬದಲಿಗೆ ಚರಣಜಿತ್ ಸಿಂಗ್ ಚನ್ನಿ ಪಂಜಾಬ್ ಮುಖ್ಯಮಂತ್ರಿಯಾದರು.

ಪ್ರಮುಖ ಸುದ್ದಿ :-   ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement