ಪಂಜಾಬ್ ಕಾಂಗ್ರೆಸ್ಸಿನಲ್ಲಿ ಬಿಕ್ಕಟ್ಟು ಉಲ್ಬಣ: ಸಿಧು ಬೆನ್ನಲ್ಲೇ ಮತ್ತೆ ನಾಲ್ವರಿಂದ ರಾಜೀನಾಮೆ…!

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ, ರಾಜ್ಯಗಳ ಹಲವು ನಾಯಕರು ತಮ್ಮ ಸ್ಥಾನಗಘೆ ರಾಜೀನಾಮೆ ಸಲ್ಲಿಸಿದ್ದು ಪಂಜಾಬ್‌ ಕಾಂಗ್ರೆಸ್ಸಿನಲ್ಲಿ ಮತ್ತೆ ಬಿಕ್ಕಟ್ಟು ಉಲ್ಬಣಗೊಂಡಿದೆ.
ನವಜೋತ ಸಿಂಗ್‌ ಸಿಧು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರಜಿಯಾ ಸುಲ್ತಾನಾ ಪಂಜಾಬ್ ಕ್ಯಾಬಿನೆಟ್ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು, ಇದರ ಬೆನ್ನಿಗೇ ಇತರ ಮೂವರು ಪಂಜಾಬ್ ಕಾಂಗ್ರೆಸ್ ನಾಯಕರು ತಮ್ಮ ಪಕ್ಷದ ಸ್ಥಾನಗಳಿಗೆ ರಾಜೀನಾಮೆ ನೀಡಿದರು.
ಕಾಂಗ್ರೆಸ್ ನಾಯಕ ಯೋಗಿಂದರ್ ಧಿಂಗ್ರಾ ರಾಜ್ಯ ಪಕ್ಷದ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದರು, ಗುಲ್ಜಾರ್ ಇಂದರ್ ಚಹಲ್ ಪಂಜಾಬ್ ಕಾಂಗ್ರೆಸ್ ಖಜಾಂಚಿಗೆ ರಾಜೀನಾಮೆ ನೀಡಿದರೆ ಗೌತಮ್ ಸೇಠ್ ಅವರು ರಾಜ್ಯ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಕ್ಷದಲ್ಲಿಯೇ ಮುಂದುವರಿಯುವುದಾಗಿ ಹೇಳಿದ್ದಾರೆ. ಸಿಧು ಅವರು ಟ್ವಿಟ್ಟರ್ ನಲ್ಲಿ ತಮ್ಮ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದ ರಾಜೀನಾಮೆ ಪತ್ರವನ್ನು ಪೋಸ್ಟ್ ಮಾಡಿದ್ದಾರೆ.
ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನವಜೋತ್ ಸಿಂಗ್ ಸಿಧು ಅವರನ್ನು ತರಾಟೆಗೆ ತೆಗೆದುಕೊಂಡ ಮಾಜಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮಂಗಳವಾರ “ಅವರು ಸ್ಥಿರ ಮನುಷ್ಯನಲ್ಲ” ಎಂದು ಹೇಳಿದ್ದಾರೆ.
ಅಮರಿಂದರ್ ಸಿಂಗ್ ಬಿಜೆಪಿ ಸೇರಲಿದ್ದಾರೆಯೇ?
ಕ್ಯಾಪ್ಟನ್ ಅಮರಿಂದರ್ ಸಿಂಗ್ ಮಂಗಳವಾರ ದೆಹಲಿಗೆ ಭೇಟಿ ನೀಡಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ವದಂತಿಗಳು ಹರಿದಾಡುತ್ತಿದ್ದಾಗ, ದೆಹಲಿಗೆ ಬಂದಿಳಿದ ನಂತರ, ಅವರು ಯಾವುದೇ ರಾಜಕೀಯ ನಾಯಕರನ್ನು ಭೇಟಿ ಮಾಡಲು ರಾಷ್ಟ್ರ ರಾಜಧಾನಿಗೆ ಬಂದಿಲ್ಲ ಎಂದು ಹೇಳಿದರು.
ಅಮರಿಂದರ್ ಸಿಂಗ್ ಅವರು ರಾಜ್ಯ ಪಕ್ಷದ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರೊಂದಿಗಿನ ಸುದೀರ್ಘವಾದ ಅಧಿಕಾರದ ಜಗಳದ ನಂತರ ವಿಧಾನಸಭಾ ಚುನಾವಣೆಗೆ ಐದು ತಿಂಗಳಿಗಿಂತ ಮೊದಲು ಅಂದರೆ ಕಳೆದ ವಾರ ಪಂಜಾಬ್ ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಈ ಮೊದಲು, ಮಾಜಿ ಸೇನಾಧಿಕಾರಿಯಾಗಿದ್ದ ಅಮರಿಂದರ್ ಸಿಂಗ್ 2002-07ರವರೆಗೆ ಪಂಜಾಬ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

ಪ್ರಮುಖ ಸುದ್ದಿ :-   ವೀಡಿಯೋ..| ಎರಡೂ ಕೈತೋಳುಗಳಿಲ್ಲದೆ ಡ್ರೈವಿಂಗ್‌ ಲೈಸೆನ್ಸ್‌ ಪಡೆದ ಏಷ್ಯಾದ ಮೊದಲ ಮಹಿಳೆ ಇವರು : ಕೇರಳದ ಯುವತಿಯ ಕಾರ್‌ ಚಾಲನೆಗೆ ಬೆರಗಾಗ್ತೀರಾ..!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement