ಮಹಾರಾಷ್ಟ್ರ: ಸೇತುವೆ ಮೇಲೆ ನೀರು ಹರಿದು ಕೊಚ್ಚಿ ಹೋದ ಬಸ್‌

ಮುಂಬೈ: ಮಹಾರಾಷ್ಟ್ರದ ಯವತ್ಮಲ್ ಜಿಲ್ಲೆಯ ಉಮರ್ಕೇಡ್ ಪಟ್ಟಣದಿಂದ ಸುಮಾರು 3 ಕಿಮೀ ದೂರದಲ್ಲಿ ತುಂಬಿ ಹರಿಯುತ್ತಿದ್ದ ನಾಲಾ ಪ್ರವಾಹದಲ್ಲಿ ಮಂಗಳವಾರ ಬೆಳಿಗ್ಗೆ ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ಸು ಕೊಚ್ಚಿ ಹೋಗಿದೆ.
ಉಮ್ ದಹಗಾಂವ್ ಸೇತುವೆಯಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಚಾಲಕ ಹಾಗೂ ನಿರ್ವಾಹಕರನ್ನು ಹೊರತು ಪಡಿಸಿ ಬಸ್ಸಿನಲ್ಲಿ ನಾಲ್ಕು ಪ್ರಯಾಣಿಕರಿದ್ದರು ಎಂದು ತಿಳಿಸಲಾಗಿದೆ.

ವೈರಲ್ ವಿಡಿಯೋದಲ್ಲಿ, ಚಾಲಕ ಮತ್ತು ಕಂಡಕ್ಟರ್ ಒಳಗೆ ಸಿಲುಕಿಕೊಂಡಿದ್ದಾರೆ ಎಂದು ಪ್ರಯಾಣಿಕರೊಬ್ಬರು ಅಧಿಕಾರಿಗಳಿಗೆ ಹೇಳುತ್ತಿದ್ದಾರೆ.
ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಂಎಸ್‌ಆರ್‌ಟಿಸಿ) ವ್ಯವಸ್ಥಾಪಕ ನಿರ್ದೇಶಕ ಶೇಖರ್ ಚನ್ನೆ ಅವರು ಬಸ್ ನೀರಿನಲ್ಲಿ ಮುಳುಗಿರುವ ಸೇತುವೆಯ ಮೇಲೆ ಮುಂದುವರಿಯಲು ಚಾಲಕ ನಿರ್ಧರಿಸಿದಾಗ ಈ ಘಟನೆ ಸಂಭವಿಸಿದೆ. ಬಸ್ ನಾಂದೇಡ್-ನಾಗ್ಪುರ ಮಾರ್ಗದಲ್ಲಿ ಸಂಚರಿಸುತ್ತಿತ್ತು.
ಭಾರೀ ಮಳೆಯಿಂದಾಗಿ ತುಂಬಿ ತುಳುಕುತ್ತಿದ್ದ ಸೇತುವೆಯನ್ನು ದಾಟುವಾಗ ಬಸ್ ಕೊಚ್ಚಿ ಹೋಗುತ್ತಿರುವ ದೃಶ್ಯಗಳನ್ನು ವೀಕ್ಷಕರು ಸೆರೆ ಹಿಡಿದಿದ್ದಾರೆ. ವಿಡಿಯೋಗಳು ವೈರಲ್ ಆದ ನಂತರ ಉಮರ್ಕೇಡ್ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪ್ರಯಾಣಿಕರನ್ನು ರಕ್ಷಿಸಿದರು ಎಂದು ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಬಾಲಕಿಗೆ ಝಡ್‌+ ಭದ್ರತೆ : ಪುಟ್ಟ ಹುಡುಗಿ ಶಾಲಾ ಬಸ್ಸಿನಿಂದ ಇಳಿದ ಕೂಡಲೇ ಮನೆಗೆ ಕರೆದೊಯ್ಯುವ ನಾಯಿಗಳ ಹಿಂಡು | ವೀಕ್ಷಿಸಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement