ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಆಯ್ಕೆ

ಬೆಂಗಳೂರು : ಈ ಬಾರಿ ಮೈಸೂರು ದಸರಾ ಹಬ್ಬದ ( Dasara Festival ) ಉದ್ಘಾಟಕರಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ( S.M. Krishna ) ಅವರನ್ನು ಆಯ್ಕೆ ಮಾಡಲಾಗಿದೆ.
ಇಂದು (ಮಂಗಳವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ದಸರಾ ಉದ್ಘಾಟನಾ ಆಯ್ಕೆ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಈ ಬಾರಿಯ ದಸರಾ ಹಬ್ಬದ ಉದ್ಘಾಟಕರಾಗಿ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕುರಿತು ಟ್ವೀಟ್‌ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯವಾಗಿದೆ. ಅವರ ಹಿರಿತನ ಸೇರಿದಂತೆ ವಿವಿಧ ಹಿನ್ನಲೆಯಲ್ಲಿ ಅವರನ್ನು ಈ ಬಾರಿಯ ದಸರಾ ಹಬ್ಬದ ಉದ್ಘಾಟಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್‌ನಿಂದ ರಾಜಕೀಯ ಜೀವನ ಆರಂಭಿಸಿದ ಎಸ್‌.ಎಂ.ಕೃಷ್ಣ ಅವರು 1999ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. 2004ರಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದರು. ಕೇಂದ್ರದ ವಿದೇಶಾಂಗ ಖಾತೆ ಸಚಿವರಾಗಿದ್ದರು. ನಂತರ ಅವರು ಬಿಜೆಪಿಗೆ ಸೇರ್ಪಡೆಯಾದರು.

ಪ್ರಮುಖ ಸುದ್ದಿ :-   ನನ್ನ ಬ್ಲ್ಯಾಕ್‌ಮೇಲ್ ಮಾಡಲು ಯತ್ನ ; ಇಬ್ಬರ ಪಾತ್ರದ ಬಗ್ಗೆ ತನಿಖೆ : ಸ್ಟಿಂಗ್‌ ಬಗ್ಗೆ ಮೌನ ಮುರಿದ ಸಿದ್ದರಾಮಯ್ಯ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement