ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯಕ್ಕೆ ಸೂಕ್ತ ಕ್ರಮ: ಘಟಕಗಳ ವ್ಯವಸ್ಥಾಪಕರಿಗೆ ಸೂಚನೆ

ಹುಬ್ಬಳ್ಳಿ: ವಿದ್ಯಾರ್ಥಿಗಳಿಗೆ ನಿಯಮಿತವಾಗಿ ತರಗತಿಗಳಿಗೆ ಹಾಜರಾಗಲು ಅನನುಕೂಲವಾಗದಂತೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ಎಲ್ಲ ಘಟಕ ವ್ಯವಸ್ಥಾಪಕರಿಗೆ ಸೂಚಿಸಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸೂಕ್ತ ಸಾರಿಗೆ ಸೇವೆ ಒದಗಿಸುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಾಲಾ-ಕಾಲೇಜುಗಳು ಪ್ರಾರಂಭವಾಗಿರುವುದರಿಂದ ಬಹುಪಾಲು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತಲುಪಲು ಸಾರಿಗೆ ಸಂಸ್ಥೆ ಬಸ್ಸುಗಳ ಮೇಲೆ ಅವಲಂಬಿತರಾಗಿದ್ದಾರೆ. ಆದರೆ ಕೋವಿಡ್‌ನಿಂದಾಗಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ವಿರಳ ಜನಸಂದಣಿಯಿಂದಾಗಿ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಸಾರಿಗೆ ಕಾರ್ಯಾಚರಣೆ ಪ್ರಾರಂಭಿಸಲಾಗಿರಲಿಲ್ಲ. ಆದಾಗ್ಯೂ ಗ್ರಾಮೀಣ ಪ್ರದೇಶಗಳಿಗೆ ಅವಶ್ಯಕತೆಗಳಿಗೆ ಅನುಗುಣವಾಗಿ ಸಾರಿಗೆ ಕಾರ್ಯಾಚರಣೆ ಪ್ರಾರಂಭಿಸಲಾಗಿತ್ತು. ಈಗ ಹಂತ ಹಂತವಾಗಿ ಶಾಲಾ ಕಾಲೇಜುಗಳು ಪ್ರಾರಂಭವಾಗುತ್ತಿರುವುದರಿಂದ, ಸಾರಿಗೆ ಸೌಕರ್ಯದ ಕೊರತೆಯಾಗುತ್ತಿರುವ ಕಾರಣ ಕೆಲವೆಡೆ ಪ್ರತಿಭಟನೆಗಳು ನಡೆದಿರುವ ಘಟನೆಗಳು ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ನಿಯಮಿತವಾಗಿ ತರಗತಿಗಳಿಗೆ ಹಾಜರಾಗಲು ಯಾವುದೇ ಅನನುಕೂಲವಾಗದಂತೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ಎಲ್ಲ ಘಟಕ ವ್ಯವಸ್ಥಾಪಕರಿಗೆ ಸೂಚಿಸಿದ್ದಾರೆ. ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ, ಸೂಕ್ತ -ಸಮರ್ಪಕ ಸಾರಿಗೆ ಸೇವೆ ಒದಗಿಸುವಂತೆ ಕಟ್ಟು ನಿಟ್ಟಿನ ಸೂಚನೆ ನೀಡುವುದರ ಜೊತೆಗೆ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement