ಬೆಂಗಳೂರು : ಈ ಬಾರಿ ಮೈಸೂರು ದಸರಾ ಹಬ್ಬದ ( Dasara Festival ) ಉದ್ಘಾಟಕರಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ( S.M. Krishna ) ಅವರನ್ನು ಆಯ್ಕೆ ಮಾಡಲಾಗಿದೆ.
ಇಂದು (ಮಂಗಳವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ದಸರಾ ಉದ್ಘಾಟನಾ ಆಯ್ಕೆ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಈ ಬಾರಿಯ ದಸರಾ ಹಬ್ಬದ ಉದ್ಘಾಟಕರಾಗಿ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕುರಿತು ಟ್ವೀಟ್ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯವಾಗಿದೆ. ಅವರ ಹಿರಿತನ ಸೇರಿದಂತೆ ವಿವಿಧ ಹಿನ್ನಲೆಯಲ್ಲಿ ಅವರನ್ನು ಈ ಬಾರಿಯ ದಸರಾ ಹಬ್ಬದ ಉದ್ಘಾಟಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ನಿಂದ ರಾಜಕೀಯ ಜೀವನ ಆರಂಭಿಸಿದ ಎಸ್.ಎಂ.ಕೃಷ್ಣ ಅವರು 1999ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. 2004ರಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದರು. ಕೇಂದ್ರದ ವಿದೇಶಾಂಗ ಖಾತೆ ಸಚಿವರಾಗಿದ್ದರು. ನಂತರ ಅವರು ಬಿಜೆಪಿಗೆ ಸೇರ್ಪಡೆಯಾದರು.


ನಿಮ್ಮ ಕಾಮೆಂಟ್ ಬರೆಯಿರಿ