ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಇನ್ನೂ ನಾಲ್ಕು ದಿನ ಮಳೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 3ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ಆರೆಂಜ್ ಅಲರ್ಟ್ ಘೋಷಣೆ..
ಬಂಗಾಳ ಕೊಲ್ಲಿಯಲ್ಲಿನ ಚಂಡ ಮಾರುತ ಹಾಗೂ ಹಾಗೂ ಅದೇ ದುರ್ನಲ ಚಂಡಮಾರುತ ಹಾದು ಹೋಗಿ ಅರಬ್ಬೀ ಸಮುದ್ರದಲ್ಲಿ ನಾಲ್ಕೈದು ದಿನಗಳಲ್ಲಿ ಶಾಹೀನ್‌ ಚಂಡಮಾರುತವಾಗಿ ಮರುಜ್ನಮ ಪಡೆಯುವ ಸಾಧಯತೆ ನಿಚ್ಚಳವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ಪ್ರಭಾವದಿಂದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಗುಲಾಬ್ ಚಂಡಮಾರುತದ ಅಬ್ಬರ ಆಂಧ್ರಪ್ರದೇಶ, ಒರಿಸ್ಸಾ, ತೆಲಂಗಾಣ, ಗುಜರಾತ್​ನಲ್ಲಿ ಕಡಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ಕರ್ನಾಟಕ ಸೇರಿ ದೇಶಾದ್ಯಂತ ಮಳೆ ಕಡಿಮೆಯಾಗಲಿದೆ ಎಂದು ಹೇಳಲಾಗಿತ್ತು.
ಆದರೆ, ಈ ದುರ್ಬಲ ಚಂಡಮಾರುತ ಅರಬ್ಬಿ ಸಮುದ್ರದತ್ತ ತೆರಳಿದ್ದು, ಅಲ್ಲಿ ಶಾಹೀನ್ ಚಂಡಮಾರುತದ ರೂಪ ತಳೆದು ಮತ್ತೆ ಅಪ್ಪಳಿಸುವ ಸಾಧ್ಯತೆಯಿರುವುದರಿಂದ ಅರಬ್ಬಿ ಸಮುದ್ರದ ನೈಋತ್ಯ ಭಾಗದಲ್ಲಿ ಹಾಗೂ ಗುಜರಾತ್ ಕರಾವಳಿ ಪ್ರದೇಶದ ಸುತ್ತಮುತ್ತಲಿನ ಭಾಗಗಳಲ್ಲಿ ಸೆ. 30ರ ವೇಳೆಗೆ ಶಾಹೀನ್ ಚಂಡಮಾರುತ ಅಬ್ಬರಿಸುವ ಸಾಧ್ಯತೆ ಹೆಚ್ಚಾಗಿದೆ. ಇದರ ಪರಿಣಾಮದಿಂದ ಗುಜರಾತ್, ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾ ಭಾಗದಲ್ಲಿ ವಿಪರೀತ ಮಳೆಯಾಗಲಿದೆ. ಇದರ ಪ್ರಭಾವ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಮೇಲೆಯೂ ಆಗಿ ಮಳೆಯಾಗಬಹುದು ಎಂದು ಹೇಳಲಾಗುತ್ತಿದೆ.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement