ಮಹಾರಾಷ್ಟ್ರದಲ್ಲಿ ಮಳೆಗೆ 17 ಮಂದಿ ಸಾವು

ಔರಂಗಾಬಾದ್: ಗುಲಾಬ್ ಚಂಡಮಾರುತದ ಪ್ರಭಾವದಿಂದ ಮಹಾರಾಷ್ಟ್ರದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಎರಡು ದಿನಗಳ ಅವಧಿಯಲ್ಲಿ ಸುಮಾರು ಹದಿನೇಳು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಮಧ್ಯ ಮಹಾರಾಷ್ಟ್ರ, ಮರಾಠವಾಡ ಪ್ರದೇಶ, ವಿದರ್ಭಾ, ಕೊಂಕಣ ಇತರೆ ಪ್ರದೇಶಗಳಲ್ಲಿ ಮಳೆ ಸಂಬಂಧಿ ಅವಘಡಗಳಲ್ಲಿ ಸುಮಾರು ಹದಿನೇಳು ಮಂದಿ ಮೃತಪಟ್ಟಿದ್ದಾರೆ. ಮನೆಗಳು ಕುಸಿದ ವರದಿಯಾಗಿದೆ.
ರಾಜ್ಯದ ಬೀಡ್ ಜಿಲ್ಲೆಯಲ್ಲಿ ಮಳೆಯಿಂದಾಗಿ ಮೂರು ಮಂದಿ ಮಧ್ಯ ಮಹಾರಾಷ್ಟ್ರದಲ್ಲಿ ಹತ್ತು ಮಂದಿ, ವಿದರ್ಭಾದಲ್ಲಿ ಆರು, ನಾಸಿಕ್‌ನಲ್ಲಿ ಒಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ವಿದರ್ಭದಲ್ಲಿ ಮಳೆಯಿಂದಾಗಿ ಸೇತುವೆಯಿಂದ ಬಸ್ ಉರುಳಿ ನಾಲ್ಕು ಮಂದಿ ಪ್ರಯಾಣಿಕರು ಮೃತಪಟ್ಟಿಪ್ಪಿದ್ದಾರೆ.
ಮಂಜಿರಾ ನದಿ ನೀರಿನ ಮಟ್ಟ ಏರಿಕೆಯಾಗಿ ವಕಾಡಿ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಎನ್‌ಡಿಆರ್‌ಎಫ್ ಸಿಬ್ಬಂದಿ ಜನರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement