ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ; ತೀರ್ಪು ಪ್ರಕಟಿಸಿದ ಹೈಕೋರ್ಟ್​

ಬೆಂಗಳೂರು: ವಿಕೃತಕಾಮಿ ಉಮೇಶ್ ರೆಡ್ಡಿ (Umesh Reddy)ಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ (Karnataka high court)​ ಎತ್ತಿ ಹಿಡಿದಿದೆ. ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡು ಮಾಡುವಂತೆ ಹೈಕೋರ್ಟ್​​​ಗೆ ಉಮೇಶ್ ರೆಡ್ಡಿ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು. 10 ವರ್ಷಗಳಿಂದ ಒಂಟಿಯಾಗಿ ಜೈಲಿನಲ್ಲಿ ಸೆರೆಯಲ್ಲಿಡಲಾಗಿದೆ. ಕ್ಷಮಾದಾನ ಅರ್ಜಿ ಇತ್ಯರ್ಥ ವಿಳಂಬ ಮಾಡಲಾಗಿದೆ. ಇದರಿಂದ ಮಾನಸಿಕ ಯಾತನೆ ಅನುಭವಿಸಿದ್ದೇನೆ ಎಂದು ಉಮೇಶ್ ರೆಡ್ಡಿ ವಕೀಲರ ಮೂಲಕ ವಾದ ಹೈಕೋರ್ಟಿನಲ್ಲಿ ಮಂಡಿಸಿದ್ದನು.
ಆದರೆ ಕೋರ್ಟ್ ಉಮೇಶ್ ರೆಡ್ಡಿಯ ವಾದವನ್ನು ತಳ್ಳಿಹಾಕಿದ್ದು ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ವಿಳಂಬ ಮಾಡಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ. ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಉಮೇಶ್ ರೆಡ್ಡಿ ಅರ್ಜಿಯನ್ನು ಹೈಕೋರ್ಟ್​​ ವಜಾ ಮಾಡಿದೆ. ನ್ಯಾ. ಅರವಿಂದ್ ಕುಮಾರ್, ನ್ಯಾ. ಪ್ರದೀಪ್ ಸಿಂಗ್ ಯೆರೂರ್ ರವರ ಪೀಠದಿಂದ ತೀರ್ಪು ಹೊರ ಬಿದ್ದಿದೆ. ಆದರೆ ಸಮಯಾಕಾಶವನ್ನು ಕೋರಿದ್ದ ಉಮೇಶ್ ರೆಡ್ಡಿ ಮನವಿಯನ್ನು ಒಪ್ಪಿದ ಕೋರ್ಟ್​, ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲು 6 ವಾರಗಳ ಕಾಲಾವಕಾಶ ನೀಡಿದೆ . ‘6 ವಾರ ಉಮೇಶ್ ರೆಡ್ಡಿಯನ್ನು ಗಲ್ಲಿಗೇರಿಸುವಂತಿಲ್ಲ. ೆಂದು ಹೇಳಿದೆ.
1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿದ್ದವು.
ಉಮೇಶ್​ ರೆಡ್ಡಿಯನ್ನು ಕೋರ್ಟ್ ಗೆ ಕರೆದೊಯ್ಯುವಾಗ ಎಸ್ಕೇಪ್ ಆಗಿದ್ದ. ಈ ಹಿಂದೆ ಕೂಡ ಬಳ್ಳಾರಿಗೆ ಶಿಫ್ಟ್ ಮಾಡುವಾಗ 1997ನಲ್ಲಿ ತಪ್ಪಿಸಿಕೊಂಡಿದ್ದ. 2002 ರಲ್ಲಿ ಬೆಂಗಳೂರಿನ‌ ಯಶವಂತಪುರದ ಸೆಲೂನ್ ಗೆ ಬಂದಿದ್ದಾಗ ಪೊಲೀಸರು ಈತನನ್ನು ಮತ್ತೆ ಬಂಧಿಸಿದ್ದರು. ಸದ್ಯ ಉಮೇಶ್ ರೆಡ್ಡಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾನೆ
ಹಲವು ಮಹಿಳೆಯರ ಅತ್ಯಾಚಾರ ಮಾಡಿ ಕೊಂದಿದ್ದ ವಿಕೃತ ಕಾಮಿ..:
ಫೆಬ್ರವರಿ 28, 1998 ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007 ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಇದಲ್ಲದೇ ಹಲವು ಅತ್ಯಾಚಾರ ಕೊಲೆ ಪ್ರಕರಣಗಳಲ್ಲಿ ಉಮೇಶ್ ರೆಡ್ಡಿ ಆರೋಪಿಯಾಗಿದ್ದ. ಹಾಗೂ 6 ಬಾರಿ ಪೊಲೀಸರ ಬಂಧನದಿಂದ ತಪ್ಪಿಸಿಕೊಂಡಿದ್ದ. ಮೊದಲಿಗೆ ಪೊಲೀಸ್ ಕೆಲಸದಲ್ಲಿದ್ದು ಸೇವೆಯಿಂದ ವಜಾಗೊಂಡಿದ್ದ ಚಿತ್ರದುರ್ಗ ಮೂಲದ ಉಮೇಶ್ ರೆಡ್ಡಿ ಜೈಲಿನಲ್ಲಿ ಬೆತ್ತಲಾಗಿ ತಿರುಗುತ್ತಿದ್ದ ಎಂದು ಸಹ ವರದಿಯಾಗಿತ್ತು. ಡಿದಿತ್ತು.
ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಉಮೇಶ್ ರೆಡ್ಡಿ ತಾಯಿ ಸಲ್ಲಿಸಿದ್ದ ಅರ್ಜಿ 2013 ರಲ್ಲಿ ತಿರಸ್ಕರಿಸಲ್ಪಟ್ಟಿತ್ತು. ತದನಂತರ ಗಲ್ಲು ಶಿಕ್ಷೆ ಜೀವಾವಧಿಯಾಗಿ ಮಾರ್ಪಡಿಸಲು ಉಮೇಶ್ ರೆಡ್ಡಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement