ನವಜೋತ್ ಸಿಧು -ಪಂಜಾಬ್ ಸಿಎಂ ಮಧ್ಯಾಹ್ನ 3 ಗಂಟೆಗೆ ಭೇಟಿ: ಯಾವುದೇ ಚರ್ಚೆಗೆ ಸಿದ್ಧ ಎಂದ ಸಿಧು

ನವದೆಹಲಿ: ಪಂಜಾಬ್‌ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನಡೆದ ಇತ್ತೀಚಿನ ಬೆಳವಣಿಗೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿಯನ್ನು ಭೇಟಿಯಾಗಲು ಒಪ್ಪಿಕೊಂಡಿರುವುದಾಗಿ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಮಾತುಕತೆಗೆ ಆಹ್ವಾನಿಸಿರುವ ಪಂಜಾಬ್‌ ಮುಖ್ಯಮಂತ್ರಿ ನವಜೋತ್‌ ಸಿಂಗ್‌ ಸಿಧು ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಗುರುವಾರ ಬೆಳಿಗ್ಗೆ ಟ್ವೀಟ್‌ ಮಾಡಿರುವ ಸಿಧು ಅವರು, ಮುಖ್ಯಮಂತ್ರಿಯವರು ನನ್ನನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. ಇಂದು(ಗುರುವಾರ) ಮಧ್ಯಾಹ್ನ 3 ಗಂಟೆಗೆ ಚಂಡೀಗಡದಲ್ಲಿರುವ ಪಂಜಾಬ್ ಭವನವನ್ನು ತಲುಪಲಿದ್ದೇನೆ. ಅವರ ನನ್ನ ಜೊತೆ ಯಾವುದೇ ರೀತಿಯ ಚರ್ಚೆಗೆ ಮುಂದಾದರೂ ಅದನ್ನು ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನವಜೋತ್ ಸಿಧು ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಅವರ ಆಪ್ತ ಸಲಹೆಗಾರ ಮೊಹಮ್ಮದ್ ಮುಸ್ತಫಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.
ಈ ಹಿಂದೆ, ಅವರ ಸಹಾಯಕರು ಅವರು “ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಉಳಿಯುತ್ತಾರೆ ಮತ್ತು ಮುಂದಿನ ವರ್ಷದ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಮುನ್ನಡೆಸುತ್ತಾರೆ” ಎಂದು ಹೇಳಿದ್ದರು. ಕ್ರಿಕೆಟಿಗನಾದ ರಾಜಕಾರಣಿ ರಾಜೀನಾಮೆಯಿಂದ ಹಿಂದೆ ಸರಿಯಬಹುದು ಎಂದು ಸೂಚಿಸುತ್ತದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಸಮಸ್ಯೆಯನ್ನು ಶೀಘ್ರವೇ ಪರಿಹರಿಸಲಾಗುವುದು. ನವಜೋತ್ ಸಿದ್ದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಮುಂದುವರಿಯಲಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕತ್ವ ನವಜೋತ್ ಸಿಧು ಅವರನ್ನು ಅರ್ಥಮಾಡಿಕೊಂಡಿದೆ. ಸಿಧು ಸಹ ಕಾಂಗ್ರೆಸ್ ನಾಯಕತ್ವವನ್ನು ಮೀರಿ ನಡೆದುಕೊಂಡಿಲ್ಲ. ಅವರು ಅಮರಿಂದರ್ ಸಿಂಗ್‌ರಂತೆ ಅಲ್ಲ. ಕಾಂಗ್ರೆಸ್‌ನ ನಾಯಕತ್ವದ ಬಗ್ಗೆ ಅಮರಿಂದರ್‌ ಸಿಂಗ್‌ ಗೌರವವನ್ನೇ ಹೊಂದಿರಲಿಲ್ಲ.ಸಿಧು ಕೆಲವೊಮ್ಮೆ ಭಾವನಾತ್ಮಕವಾಗಿ ವರ್ತಿಸುತ್ತಾರೆ. ಇದನ್ನು ಕಾಂಗ್ರೆಸ್ ನಾಯಕತ್ವವು ಅರ್ಥಮಾಡಿಕೊಂಡಿದೆ ಎಂದು ಮುಸ್ತಫಾ ಸಮರ್ಥಿಸಿಕೊಂಡಿದ್ದಾರೆ.
ಅಮರಿಂದರ್‌ ಸಿಂಗ್‌ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಸೆ. 18ರಂದು ಕೆಳಗಿಳಿಸಲು ಯಶಸ್ವಿಯಾದ ಸಿಧು, ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕವಾಗಿ 71ನೇ ದಿನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಪರಿಣಾಮ ಪಕ್ಷವು ಮತ್ತೆ ಪಂಜಾಬಿನಲ್ಲಿ ಬಿಕ್ಕಟ್ಟಿಗೆ ಸಿಲುಕಿದೆ. ತಮ್ಮ ಮಹತ್ವ ಕಡಿಮೆಯಾಗುತ್ತಿದೆ ಎಂಬ ವಿಚಾರವೂ ಸಿಧು ಅವರ ಅಸಮಾಧಾನಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಪ್ರಮುಖ ಸುದ್ದಿ :-   ದೆಹಲಿ ಹೈಕೋರ್ಟ್ ಮರುಮೌಲ್ಯಮಾಪನದ ಅರ್ಜಿ ತಿರಸ್ಕರಿಸಿದ ನಂತರ ಕಾಂಗ್ರೆಸ್ಸಿಗೆ 1700 ಕೋಟಿ ತೆರಿಗೆ ನೋಟಿಸ್ ನೀಡಿದ ಐಟಿ : ಮೂಲಗಳು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement