ಬೆಂಗಳೂರು: ಬಾಕಿ ತೆರಿಗೆ ಪಾವತಿಸದ ಮಂತ್ರಿ ಮಾಲ್​ಗೆ ಬೀಗ ಜಡಿದ ಬಿಬಿಎಂಪಿ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಗೆ ಆಸ್ತಿ ತೆರಿಗೆ ಕಟ್ಟದ ಸತಾಯಿಸುತ್ತಿದ್ದ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ (Mantri Square Mall)ಗೆ ಇಂದು (ಸೆಪ್ಟಂಬರ್‌30, ಗುರುವಾರ) ಬೆಳಿಗ್ಗೆ ಬೀಗ ಹಾಕಲಾಗಿದೆ.
ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ ಮಂತ್ರಿ ಮಾಲ್‌ಗೆ ಬೀಗ ಹಾಕಿದ ಕಾರಣ ಮಾಲ್‌ಗೆ ಬಿಬಿಎಂಪಿ ಅಧೀಕಾರಿಗಳು ಬೀಗ ಜಡಿದಿದ್ದಾರೆ.
2017ರ ಬಳಿಕ ಇದೂವರೆಗೂ ಮಂತ್ರಿ ಮಾಲ್​ ಆಸ್ತಿ ತೆರಿಗೆ ಕಟ್ಟಿಲ್ಲ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದ ಮಂತ್ರಿ ಸ್ಕ್ವೇರ್​ ಮಾಲ್ ಮುಖ್ಯದ್ವಾರಕ್ಕೆ ಬಿಬಿಎಂಪಿ ಅಧಿಕಾರಿಗಳು ಕೊನೆಗೂ ಬೀಗ ಹಾಕಿದ್ದಾರೆ. ಎಷ್ಟೇ ನೋಟೀಸ್ ನೀಡಿದ್ರು ತೆರಿಗೆ ಪಾವತಿ ಮಾಡದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಸುಮಾರು 20 ಕೋಟಿ ರೂ.ಗಳಿಗಿಂತ ಹೆಚ್ಚು ತೆರಿಗೆಕಟ್ಟಬೇಕಿದೆ ಎನ್ನಲಾಗಿದೆ. ಹೀಗಾಗಿ ಬಿಬಿಎಂಪಿ ಜಂಟಿ ಆಯುಕ್ತ ಶಿವಸ್ವಾಮಿ ಅವರಿಂದ ಇಂದು ಬೀಗ ಜಡಿಯುವ ಕಾರ್ಯ ನೆರವೇರಿದೆ.
ಬಿಬಿಎಂಪಿ (BBMP) ಪಶ್ಚಿಮ ವಲಯದಲ್ಲಿ ಅತೀ ದೊಡ್ಡ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಮಂತ್ರಿ ಮಾಲ್​ ಮೊದಲ ಸ್ಥಾನದಲ್ಲಿದೆ. ಬೆಂಗಳೂರು ಮಲ್ಲೇಶ್ವರ ಸಂಪಿಗೆ ರಸ್ತೆಯ ಆರಂಭದಲ್ಲಿರುವ ಮಂತ್ರಿ ಮಾಲ್ (Mantri Square Mall ) ತೆರಿಗೆ ಕಟ್ಟುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದ ನಂತರವೂ ತೆರಿಗೆ ಕಟ್ಟಿರಲಿಲ್ಲ ಎಂದು ಹೇಳಲಾಗಿದೆ. ಇಂದು (ಗುರುವಾರ) ಮಂತ್ರಿ ಮಾಲ್​ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement