ಮಹತ್ವದ ನಿರ್ಧಾರ.. ಡಿಪ್ಲೊಮಾ ಕೋರ್ಸ್ ಇನ್ಮುಂದೆ ಪಿಯುಸಿಗೆ ತತ್ಸಮಾನ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ವಿದ್ಯಾರ್ಹತೆಯನ್ನು ದ್ವಿತೀಯ ಪಿಯುಸಿ ವಿದ್ಯಾರ್ಹತೆಗೆ ತತ್ಸಮಾನ ಎಂದು ಪರಿಗಣಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸುವ ಮೂಲಕ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶರಣಪ್ಪ ನಡವಳಿ ಹೊರಡಿಸಿದ್ದು, ಮೂರು ವರ್ಷಗಳ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪಿಯುಸಿ ವಿದ್ಯಾರ್ಹತೆಗೆ ತತ್ಸಮಾನವೇ ಎಂಬ ವಿಷಯವನ್ನು ನಿರ್ಧರಿಸುವ ಸಂಬಂಧ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಆದೇಶಿಸಲಾಯಿತು. ಸಮಿತಿಯು ಸವಿಸ್ತಾರವಾಗಿ ಚರ್ಚಿಸಿ ಅದರ ಸಾಧಕ-ಬಾಧಕಗನ್ನು ಪರಿಗಣಿಸಿ, ಅಭಿಪ್ರಾಯದೊಂದಿಗೆ 2021ರ ಮಾರ್ಚ್ 31ರಂದು ಸರ್ಕಾರಕ್ಕೆ ಸಭಾ ನಡವಳಿಯೊಂದಿಗೆ ವರದಿಯನ್ನು ಸಲ್ಲಿಸಲಾಗಿದೆ.
ಈ ವರದಿಯನ್ನು ಆಧರಿಸಿ, ನೇರ ನೇಮಕಾತಿ, ಅನುಕಂಪದ ಆಧಾರದ ನೇಮಕಾತಿ ಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯುಲು ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಶಿಕ್ಷಣವನ್ನು ಪಿ.ಯು.ಸಿ ಗೆ ತತ್ಸಮಾನವೆಂದು ಪರಿಗಣಿಸುವುದು. 2015ಕ್ಕಿಂತ ಹಿಂದಿನ ವರ್ಷಗಳಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಕೆಪಿಎಸ್ಸಿಯಿಂದ ನಡೆಸುವ ಇಲಾಖಾ ಪರೀಕ್ಷೆಗಳ ಜೊತೆಗೆ, ಕನ್ನಡ ಭಾಷಾ ಪರೀಕ್ಷೆಯನ್ನು ತೇರ್ಗಡೆ ಹೊಂದುವುದು ಎಂದು ಆದೇಶಿಸಲಾಗಿದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement