ಹಾಲಕ್ಕಿ ಸಮಾಜದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ಪದ್ಮಶ್ರೀ ಪ್ರಶಸ್ತಿ ಮರಳಿಸುವೆ, ವಿಧಾನಸೌಧದ ಮುಂದೆ ಧರಣಿ ಕೂಡ್ರುವೆ:ಸುಕ್ರಿ ಬೊಮ್ಮಗೌಡ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಸೀಮಿತವಾಗಿರುವ ಬುಡಕಟ್ಟು ಜನಾಂಗವಾದ ಹಾಲಕ್ಕಿ ಸಮುದಾಯವನ್ನು ಕೇಂದ್ರ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ಕೇಂದ್ರ ಸರ್ಕಾರ ತನಗೆ ನೀಡಿದ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್‌ ಮಾಡಲು ಜನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ನಿರ್ಧರಿಸಿದ್ದಾರೆ. ಅಲ್ಲದೆ ತಮ್ಮ ಹಾಲಕ್ಕಿ ಜನಾಂಗದ ಹಕ್ಕಿಗಾಗಿ ವಿಧಾನಸೌಧದಲ್ಲಿ ಪ್ರತಿಭಟನೆಗೆ ಕುಳಿತುಕೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು ಉತ್ತರ ಕನ್ನಡ ಜಿಲ್ಲೆಗೆ ಮಾತ್ರ ಸೀಮಿತವಾಗಿರುವ, ಕಾಡನ್ನು ನಂಬಿ ಬದುಕು ಕಟ್ಟಿಕೊಂಡ ಹಾಲಕ್ಕಿ ಜನಾಂಗ ಈ ವರೆಗೂ ಸಂಕಷ್ಟದಲ್ಲಿದೆ. ನಮ್ಮಲ್ಲಿ ಶಿಕ್ಷಣ ಪಡೆದವರೇ ಕಮ್ಮಿ, ಉತ್ತಮ ಕೆಲಸ ಸಹ ಇಲ್ಲ. ಹೀಗಿರುವಾಗ ಕಳೆದ 20 ವರ್ಷದಿಂದ ನಮ್ಮ ಜನಾಂಗವನ್ನು ಪರಿಶಿಷ್ಟ ಪಂಗಡಬೇಕು ಎಂಬ ಹೋರಾಟ ನಡೆಯುತ್ತಲೇ ಇದೆ. ಈ ಕುರಿತು ಕೇಂದ್ರ ಸರ್ಕಾರ ಈವರೆಗೂ ತೀರ್ಮಾನ ತೆಗೆದುಕೊಂಡಿಲ್ಲ. ಇಂಥಾ ಸಂದರ್ಭದಲ್ಲಿ ಉಪಯೋಗಕ್ಕೆ ಬಾರದ ಈ ಪ್ರಶಸ್ತಿಯನ್ನು ಇಟ್ಟುಕೊಂಡು ನಾನೇನು ಮಾಡಬೇಕು. ಜನರಿಗೆ ಸಿಗಬೇಕಾದ ಹಕ್ಕು ಸಿಗದಿದ್ದರೆ ನಾನು ಇದ್ದು ಏನು ಪ್ರಯೋಜನ ಎಂದು ಹೇಳಿರುವ ಅವರು ಸೌಲಭ್ಯ ಸಿಗದ ಕಾರಣಕ್ಕೆ ಈ ನಿರ್ಧಾರಕ್ಕೆ ಬಂದಿದ್ದು, ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ವಿಧಾನಸೌದಕ್ಕೆ ತೆರಳಿ ಪ್ರತಿಭಟನೆ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹಾಲಕ್ಕಿ ಸಮುದಾಯದವರು ಉತ್ತರ ಕನ್ನಡದ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಕಾಣಸಿಗುತ್ತಾರೆ. ಈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎನ್ನುವ ಒತ್ತಾಯ  ಹಿಂದಿನಿಂದಲೂ ಇದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement