ಬೆಂಗಳೂರು: ಗುಲಾಬ್ ಚಂಡಮಾರುತದ ಪರಿಣಾಮ ಒಡಿಶಾ, ಪಶ್ಚಿಮ ಬಂಗಾಳ ಮತ್ತು ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಗೆ ಕಾರಣವಾದ ಗುಲಾಬ್ ಚಂಡಮಾರು ಅರಬ್ಬೀ ಸಮುದ್ರದಲ್ಲಿ ದುರ್ಬಲಗೊಂಡ ನಂತರ ಮತ್ತೆ ಮರುಜನ್ಮ ಪಡೆದು ಶಾಹೀನ್ ಚಂಡಮಾರುತ( Cyclone Shaheen)ವಾಗಿ ಅಕ್ಟೋಬರ್ 1ರಂದು ವಿಶೇಷವಾಗಿ ಗುಜರಾತ್ ಹಾಗೂ ಉತ್ತರ ಮಹಾರಾಷ್ಟ್ರಕ್ಕೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ.
ಇದರ ಪರಿಣಾಮ ಕರ್ನಾಟಕದಲ್ಲಿಯೂ (Karnataka Rains) ಅಕ್ಟೋಬರ್ 1ರಿಂದ 4ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಶಾಹೀನ್ ಚಂಡಮಾರುತ ಅಕ್ಟೋಬರ್ 1ರಂದು ಅರಬ್ಬೀ ಸಮುದ್ರದ ಗುಜರಾತ್ ಹಾಗೂ ಮಹಾರಾಷ್ಟ್ರದ ಕರಾವಳಿಗೆ ಅಪ್ಪಳಿಸಲಿದ್ದು, ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಶಾಹೀನ್ ಚಂಡಮಾರುತ ಅರಬ್ಬಿ ಸಮುದ್ರದ ಗುಜರಾತ್, ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಭಾರೀ ಮಳೆಯಾಗಲಿದ್ದು, ಅದೇ ರೀತಿ ಗೋವಾ ಹಾಗೂ ಕರ್ನಾಟಕದ ಕರಾವಳಿ ಪ್ರದೇಶ ಹಾಗೂ ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 4ರ ವರೆಗೂ ಭಾರೀ ಮಳೆಯಾವ ಸಾಧ್ಯತೆಯಿದೆ.
ಮಹಾರಾಷ್ಟ್ರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎನ್‌ಡಿಆರ್‌ಎಫ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ