ಕರ್ನಾಟಕದಲ್ಲಿ ಮಂಗಳವಾರ ಹೊಸ ಸೋಂಕು ಏರಿಕೆ, ಸಾವಿನ‌ ಸಂಖ್ಯೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಕೋರೊನಾ ಸೋಂಕು ಸಂಖ್ಯೆ ಏರಿಕೆಯಾಗಿದ್ದು ಸಾವಿನ ಸಂಖ್ಯೆ ‌ ಇಳಿಕೆಯಾಗಿದೆ. ರಾಜ್ಯದಲ್ಲಿ ಇಂದು (ಮಂಗಳವಾರ) ಹೊಸದಾಗಿ 629 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು ಇದೇವೇಳೆ 17 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ 782 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಬೀದರ್, ಗದಗ, ಕಲಬುರಗಿ, ಕೊಪ್ಪಳ , ರಾಯಚೂರು ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಇಂದು … Continued

ಅರೇಬಿಯನ್ ಸಮುದ್ರ ದಾಟುವ ಗುಲಾಬ್ ಚಂಡಮಾರುತ ಶಾಹೀನ್ ಚಂಡಮಾರುತವಾಗಿ ಮರುಜನ್ಮ ಪಡೆಯಲಿದೆ: ಐಎಂಡಿ

ನವದೆಹಲಿ: ಸೋಮವಾರ ರಾತ್ರಿಯಿಂದ ತೆಲಂಗಾಣ, ದಕ್ಷಿಣ ಛತ್ತೀಸಗಡ ಮತ್ತು ವಿದರ್ಭ ಪ್ರದೇಶದಲ್ಲಿ ದುರ್ಬಲಗೊಂಡ ಗುಲಾಬ್ ಚಂಡಮಾರುತವು ಅರೇಬಿಯನ್ ಸಮುದ್ರಕ್ಕೆ ತೆರಳಿ ಶಾಹೀನ್ ಚಂಡಮಾರುತವಾಗಿ ಮತ್ತೆ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೊಸ ಬುಲೆಟಿನ್ ನಲ್ಲಿ, “ಪ್ರಸ್ತುತ ಗುಲಾಬ್‌ ಚಂಡಮಾರುತದ ದುರ್ನಲಗೊಂಡ ನಂತರ ಈಶಾನ್ಯ ಅರಬ್ಬಿ ಸಮುದ್ರ ಮತ್ತು ಪಕ್ಕದ ಗುಜರಾತ್ … Continued

ಕಾಂಗ್ರೆಸ್‌ ಸೇರಿದ ಕನ್ಹಯ್ಯಕುಮಾರ್, ಪಕ್ಷಕ್ಕೆ ಬೆಂಬಲ ಘೋಷಿಸಿದ ಜಿಗ್ನೇಶ್ ಮೇವಾನಿ

ನವದೆಹಲಿ ಮಾಜಿ ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ್ ಇಂದು (ಮಂಗಳವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಅವರು ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಮಾರಂಭದಲ್ಲಿ, ಗುಜರಾತ್ ದಲಿತ ನಾಯಕ ಜಿಗ್ನೇಶ್ ಮೇವಾನಿ ಕೂಡ ತಾಂತ್ರಿಕ ಕಾರಣಗಳಿಂದ ಔಪಚಾರಿಕವಾಗಿ ಪಕ್ಷಕ್ಕೆ ಸೇರಲು ಸಾಧ್ಯವಾಗದಿದ್ದರೂ, … Continued

ಪಂಜಾಬ್ ಕಾಂಗ್ರೆಸ್ಸಿನಲ್ಲಿ ಬಿಕ್ಕಟ್ಟು ಉಲ್ಬಣ: ಸಿಧು ಬೆನ್ನಲ್ಲೇ ಮತ್ತೆ ನಾಲ್ವರಿಂದ ರಾಜೀನಾಮೆ…!

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ, ರಾಜ್ಯಗಳ ಹಲವು ನಾಯಕರು ತಮ್ಮ ಸ್ಥಾನಗಘೆ ರಾಜೀನಾಮೆ ಸಲ್ಲಿಸಿದ್ದು ಪಂಜಾಬ್‌ ಕಾಂಗ್ರೆಸ್ಸಿನಲ್ಲಿ ಮತ್ತೆ ಬಿಕ್ಕಟ್ಟು ಉಲ್ಬಣಗೊಂಡಿದೆ. ನವಜೋತ ಸಿಂಗ್‌ ಸಿಧು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರಜಿಯಾ ಸುಲ್ತಾನಾ ಪಂಜಾಬ್ ಕ್ಯಾಬಿನೆಟ್ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು, ಇದರ … Continued

ಪ. ಬಂ. ಚುನಾವಣೋತ್ತರ ಹಿಂಸಾಚಾರ: ಸಿಬಿಐ ತನಿಖೆ ಪ್ರಶ್ನಿಸಿ ರಾಜ್ಯದ ಮನವಿ; ಕೇಂದ್ರಕ್ಕೆ ಸುಪ್ರೀಂ ನೋಟಿಸ್

ನವದೆಹಲಿ: ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರದ ವೇಳೆ ನಡೆದ ಕೊಲೆ, ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳನ್ನು ಸಿಬಿಐ ತನಿಖೆಗೆ ಆದೇಶಿಸಿದ್ದ ಕೋಲ್ಕತ್ತಾ ಹೈಕೋರ್ಟ್‌ ನಿರ್ಧಾರ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ಸಂಬಂಧ ಸುಪ್ರೀಂಕೋರ್ಟ್‌ ಮಂಗಳವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಅನಿರುದ್ಧ ಬೋಸ್ ಅವರಿದ್ದ ಪೀಠ ಕೇಂದ್ರ … Continued

ಮತ್ತೊಂದು ದಿಢೀರ್‌ ಬೆಳವಣಿಗೆಯಲ್ಲಿ ಪಂಜಾಬ್ ಸಚಿವೆ ರಜಿಯಾ ಸುಲ್ತಾನಾ ರಾಜೀನಾಮೆ

ಮತ್ತೊಂದು ದಿಢೀರ್‌ ಬೆಳವಣಿಗೆಯಲ್ಲಿ ಪಂಜಾಬ್ ಸಚಿವೆ ರಜಿಯಾ ಸುಲ್ತಾನಾ ಮಂಗಳವಾರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ. ರಜಿಯಾ ಸುಲ್ತಾನಾ ತಮ್ಮ ರಾಜೀನಾಮೆ ಪತ್ರದಲ್ಲಿ “ನವಜೋತ್ ಸಿಂಗ್ ಸಿಧುಗೆ ಬೆಂಬಲಿಸಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಚರಣ್ಜಿತ್ … Continued

ರಾಷ್ಟ್ರಮಟ್ಟದ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿ: ಜೆಎಸ್ಎಸ್‌ ನಿಂದ ಸನ್ಮಾನ

ಧಾರವಾಡ: ಜೆಎಸ್‌ಎಸ್ ಬನಶಂಕರಿ ಕಲಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಕ್ಕೆ ಅತ್ಯತ್ತಮ ಘಟಕ ಮತ್ತು ಸುರೇಶಪ್ಪ ಸಜ್ಜನ ಅವರಿಗೆ ೨೦೧೯-೨೦೨೦ನೇ ಸಾಲಿನ ರಾಷ್ಟ್ರಮಟ್ಟದ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿಯನ್ನು ೨೪ ಸಪ್ಟೆಂಬರ್ ೨೦೨೧ ರಂದು ದೆಹಲಿಯ ಸುಶ್ಮಾಸ್ವರಾಜ ಭವನದಲ್ಲಿ ನೀಡಿ ಗೌರವಿಸಲಾಯಿತು. ಕಳೆದ ಆರು ವರ್ಷಗಳ ಅವಧಿಯಲ್ಲಿ ೧೦ ರಕ್ತದಾನ ಶಿಬಿರ, ೧೨ ಉಚಿತ … Continued

ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಆಯ್ಕೆ

ಬೆಂಗಳೂರು : ಈ ಬಾರಿ ಮೈಸೂರು ದಸರಾ ಹಬ್ಬದ ( Dasara Festival ) ಉದ್ಘಾಟಕರಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ( S.M. Krishna ) ಅವರನ್ನು ಆಯ್ಕೆ ಮಾಡಲಾಗಿದೆ. ಇಂದು (ಮಂಗಳವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ದಸರಾ ಉದ್ಘಾಟನಾ ಆಯ್ಕೆ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಈ … Continued

ಎತ್ತಿನ ಬಂಡಿ ಏರಿಬಂದು ಕಬ್ಬು ನಾಟಿ ಮಾಡಿದ ಕೃಷಿ ಸಚಿವರು

ಬೆಳಗಾವಿ : ರೈತರು ಮುಖ್ಯ‌ ಬೆಳೆಯ ಜತೆಗೆ ಇತರ ಉಪ ಬೆಳೆಗಳನ್ನು ಬೆಳೆಯಬೇಕು; ಹೈನುಗಾರಿಕೆ, ಕುರಿ ಸಾಕಾಣಿಕೆ, ಜೇನು ಸಾಕಾಣಿಕೆ ಮತ್ತಿತರ ಉಪ ಕಸುಬು ಮಾಡುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ರೈತರಿಗೆ ಕರೆ ನೀಡಿದರು. ರೈತರೊಂದಿಗೊಂದು ದಿನ” ಕಾರ್ಯಕ್ರಮದ ಅಂಗವಾಗಿ ನಿಪ್ಪಾಣಿ ತಾಲ್ಲೂಕಿನ ಭೀವಶಿ ಗ್ರಾಮದ ನರಸಿಂಹ ಯಶವಂತ ಚೌಗಲೆ … Continued

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯಕ್ಕೆ ಸೂಕ್ತ ಕ್ರಮ: ಘಟಕಗಳ ವ್ಯವಸ್ಥಾಪಕರಿಗೆ ಸೂಚನೆ

ಹುಬ್ಬಳ್ಳಿ: ವಿದ್ಯಾರ್ಥಿಗಳಿಗೆ ನಿಯಮಿತವಾಗಿ ತರಗತಿಗಳಿಗೆ ಹಾಜರಾಗಲು ಅನನುಕೂಲವಾಗದಂತೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ಎಲ್ಲ ಘಟಕ ವ್ಯವಸ್ಥಾಪಕರಿಗೆ ಸೂಚಿಸಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸೂಕ್ತ ಸಾರಿಗೆ ಸೇವೆ ಒದಗಿಸುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ. … Continued