ಆತ ಸ್ಥಿರ ಮನುಷ್ಯನಲ್ಲ ಎಂದು ನಾನು ನಿನಗೆ ಹೇಳಿದ್ದೆ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ ನಂತರ ಅಮರಿಂದರ್‌ ಹೇಳಿಕೆ

ನವದೆಹಲಿ: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನವಜೋತ್ ಸಿಂಗ್ ಸಿಧು (Navjot Singh Sidhu) ಅವರನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ (Captain Amarinder Singh) “ಅವರು ಸ್ಥಿರ ಮನುಷ್ಯನಲ್ಲ” ಎಂದು ಹೇಳಿದ್ದಾರೆ. ಆತ ಸ್ಥಿರ ಮನುಷ್ಯನಲ್ಲ ಮತ್ತು ಗಡಿ ರಾಜ್ಯ … Continued

ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜೆಗೆ ಮುಜಾವರ್ ನೇಮಕ : ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು: ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜಾ ಕೈಂಕರ್ಯ ನೆರವೇರಿಸಲು ಮುಜಾವರ್ ನೇಮಕ   ಮಾಡಿ 2018ರ ಮಾರ್ಚ್‌ 19ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಮಂಗಳವಾರ ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ. ಪ್ರಕರಣವನ್ನು ಹೊಸದಾಗಿ ಪರಿಗಣಿಸಿ, ಕಾನೂನಿನ ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸುತ್ತಿದ್ದೇನೆ. ಉನ್ನತಮಟ್ಟದ ಸಮಿತಿಯ ವರದಿಯ ಬಗ್ಗೆ ಯಾವುದೇ ಉಲ್ಲೇಖ … Continued

ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ..!

ನವದೆಹಲಿ: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಆದಾಗ್ಯೂ, ಅವರು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ನವಜೋತ್ ಸಿಂಗ್ ಸಿಧು ಅವರು ಟ್ವಿಟ್ಟರ್ ನಲ್ಲಿ ತಮ್ಮ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದ ಪತ್ರವನ್ನು ಪೋಸ್ಟ್ ಮಾಡಿದ್ದಾರೆ. ಪಂಜಾಬ್‌ನ ಭವಿಷ್ಯ … Continued

ಅತ್ಯಾಚಾರ ಸಂತ್ರಸ್ತೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಪೊಲೀಸ್‌ ಪೇದೆ ಬಂಧನ

ಮಂಗಳೂರು: ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭವತಿ ಮಾಡಿದ್ದ ಆರೋಪಿ ಪೊಲೀಸ್ ಕಾನ್ಸ್ ಟೇಬಲ್ ಶಿವರಾಜನನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್.ಪಿ. ರಿಷಿಕೇಶ್ ಸೋನಾವಣೆ ತಿಳಿಸಿದ್ದಾರೆ. ಅತ್ಯಾಚಾರ ಸಂತ್ರಸ್ತೆ ಮೇಲೆ ಅತ್ಯಾಚಾರ ಮಾಡಿರುವುದಾಗಿ ಕಡಬ ಠಾಣೆ ಪೊಲೀಸ್ ಪೇದೆ ಶಿವರಾಜ್ ವಿರುದ್ಧ ಸಂತ್ರಸ್ತೆ ತಂದೆ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ … Continued

ಮಹಾರಾಷ್ಟ್ರ: ಸೇತುವೆ ಮೇಲೆ ನೀರು ಹರಿದು ಕೊಚ್ಚಿ ಹೋದ ಬಸ್‌

ಮುಂಬೈ: ಮಹಾರಾಷ್ಟ್ರದ ಯವತ್ಮಲ್ ಜಿಲ್ಲೆಯ ಉಮರ್ಕೇಡ್ ಪಟ್ಟಣದಿಂದ ಸುಮಾರು 3 ಕಿಮೀ ದೂರದಲ್ಲಿ ತುಂಬಿ ಹರಿಯುತ್ತಿದ್ದ ನಾಲಾ ಪ್ರವಾಹದಲ್ಲಿ ಮಂಗಳವಾರ ಬೆಳಿಗ್ಗೆ ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ಸು ಕೊಚ್ಚಿ ಹೋಗಿದೆ. ಉಮ್ ದಹಗಾಂವ್ ಸೇತುವೆಯಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಚಾಲಕ ಹಾಗೂ … Continued

ಉರಿ ಸೆಕ್ಟರ್​​ನಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲ: ಓರ್ವ ಪಾಕ್ ಉಗ್ರನ ಹತ್ಯೆ, ಮತ್ತೊಬ್ಬನ ಸೆರೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿನ ಗಡಿ ನಿಯಂತ್ರಣ ರೇಖೆಯಲ್ಲಿ ಸೋಮವಾರ ರಾತ್ರಿ (Line of Control) ಸೇನೆಯು ಭಯೋತ್ಪಾದಕರು ಒಳನುಸುಳುವುದನ್ನು ವಿಫಲಗೊಳಿಸಿದೆ. ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಉಗ್ರನನ್ನು ಸೇನಾಪಡೆ ಹತ್ಯೆ ಮಾಡಿದ್ದು ಇನ್ನೊಬ್ಬನನ್ನು ಸೆರೆಹಿಡಿಯಲಾಗಿದೆ. ಈ ವೇಳೆ ಮೂವರು ಸೈನಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅನುಮಾನಾಸ್ಪದ ಚಲನೆಯನ್ನು ಗಮನಿಸಿದ ನಂತರ ಬಾರಾಮುಲ್ಲಾ ಜಿಲ್ಲೆಯ ಉರಿ … Continued

ಉತ್ತರ ಪ್ರದೇಶದ ಐಎಎಸ್ ಅಧಿಕಾರಿ ಮೊಹಮ್ಮದ್ ಇಫ್ತಿಖರುದ್ದೀನ್ ವಿರುದ್ಧ ಹಿಂದೂ ವಿರೋಧಿ ಪ್ರಚಾರದ ಆರೋಪ

ಕಾನ್ಪುರ: ಉತ್ತರ ಪ್ರದೇಶದಲ್ಲಿ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಐಎಎಸ್ ಅಧಿಕಾರಿ ಮೊಹಮ್ಮದ್ ಇಫ್ತಿಖರುದ್ದೀನ್ ವಿರುದ್ಧ ಮಠ ಮಂದಿರ ಸಮನ್ವಯ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷ ಭೂಪೇಶ್ ಅವಸ್ಥಿ ಈ ಆರೋಪಗಳನ್ನು ಮಾಡಿದ್ದಾರೆ. ಮೊಹಮ್ಮದ್ ಇಫ್ತಿಖರುದ್ದೀನ್ ಪ್ರಸ್ತುತ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ … Continued

ಸರ್ಕಾರಿ ಕೊಠಡಿ ಕಾಣೆಯಾಗಿದೆ ಹುಡುಕಿಕೊಡಿ: ಪೊಲೀಸ್‌ ಠಾಣೆಗೆ ಬಂದ ಹೀಗೊಂದು ದೂರು…!

ಕೆ.ಆರ್.ಪೇಟೆ: ಕೃಷ್ಣರಾಜಪೇಟೆಯಲ್ಲಿ ಕೆಲ ವರ್ಷಗಳ ಹಿಂದೆ ನಿರ್ಮಿಸಿದ್ದ ಸರ್ಕಾರಿ ಕೊಠಡಿ ಕಾಣೆಯಾಗಿದೆ. ಹುಡುಕಿಕೊಡಿ ಎಂಬ ದೂರೊಂದು ಪೊಲೀಸ್‌ ಠಾಣೆಗೆ ಬಂದಿದೆ. ಈಗ ಕಾಣೆಯಾದ ಕಟ್ಟಡ ಹುಡುಕುವುದು ಹೇಗೆಂಬ ತಲೆನೋವು ಪೊಲೀಸರದ್ದು. ಪುರಸಭೆ ಮಾಲೀಕತ್ವದ ಖಾಸಿಂ ಖಾನ್ ಸಮುದಾಯ ಭವನದಲ್ಲಿ ಸಾರ್ವಜನಿಕರ ತೆರಿಗೆ ಹಣದಲ್ಲಿ ಹೆಚ್ಚುವರಿಯಾಗಿ ನಿರ್ಮಾಣ ಮಾಡಿದ್ದ ಕಟ್ಟಡ ಕಾಣೆಯಾಗಿದ್ದು. ಅಧಿಕಾರಿಗಳು ತಕ್ಷಣ ಪತ್ತೆಮಾಡಿ ಸಾರ್ವಜನಿಕರ … Continued

ಬೆಂಗಳೂರಿನಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ಕುಸಿತ: ನಾಲ್ವರಿಗೆ ಗಾಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿದುಬಿದ್ದ ಘಟನೆ ನಡೆದಿದೆ. ಕೆಎಂಎಫ್ ಕ್ವಾರ್ಟರ್ಸ್ ನೊಳಗಿರುವ 50 ವರ್ಷಗಳಷ್ಟು ಹಳೆಯ ಕಟ್ಟಡ ಕುಸಿದುಬಿದ್ದಿದೆ. ಇಂದು (ಮಂಗಳವಾರ) ಬೆಳಿಗ್ಗೆ ಒಂಭತ್ತರ ಸುಮಾರಿಗೆ ಈ ಘಟನೆ ನಡೆದಿದೆ.ನಗರದ ಡೇರಿ ಸರ್ಕಲ್ ಬಳಿಯಿರುವ ಬಮೂಲ್ ನೌಕರ ಕ್ವಾರ್ಟರ್ಸ್ ಇದಾಗಿದೆ. ಇದು ನಿನ್ನೆ ಬಿದ್ದಿದ್ದ ಕಟ್ಟಡದಿಂದ ಅರ್ಧ ಕಿಮೀ ದೂರದಲ್ಲಿದೆ.ಕಟ್ಟಡ … Continued

ಹಾನಗಲ್, ಸಿಂದಗಿ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಸಮರಕ್ಕೆ ಮುಹೂರ್ತ ನಿಗದಿಯಾಗಿದೆ. ಸಿಂಧಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಕ್ಟೋಬರ್ 30ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಕೇಂದ್ರ ಚುನಾವಣಾ ಆಯೋಗ ಇಂದು ವಿವಿಧ ರಾಜ್ಯಗಳಲ್ಲಿ ತೆರವಾಗಿರುವ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಿಸಿದ್ದು, ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳಿಗೂ ದಿನಾಂಕವನ್ನು ನಿಗದಿಪಡಿಸಿದೆ. ಈ … Continued