ಕೊಪ್ಪಳ: ಅಕ್ರಮವಾಗಿ ಸಾಗಿಸತ್ತಿದ್ದ 340 ಕ್ವಿಂಟಲ್ ಪಡಿತರ ಅಕ್ಕಿ ವಶ

posted in: ರಾಜ್ಯ | 0

ಕೊಪ್ಪಳ: ಜಿಲ್ಲೆಯ ಗಂಗಾವತಿಯಿಂದ ಗುಜರಾತಿಗೆ ಅನಧಿಕೃತವಾಗಿ ಸಾಗಿಸತ್ತಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ವಣಗೇರಿ ಬಳಿಯ ಟೋಲ್ ಪ್ಲಾಜಾ ಬಳಿ, ಆಹಾರ ಇಲಾಖೆ ನಿರೀಕ್ಷಕ ನಿತೀನ್ ಅಗ್ನಿ ನೇತೃತ್ವದಲ್ಲಿ ದಾಳಿ ಮಾಡಿ, ಲಾರಿ ಸಮೇತವಾಗಿ ಅಕ್ರಮ ಸಾಗಾಟದ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಲಾರಿ ಚಾಲಕ ಮದನಲಾಲ್ ವಿರುದ್ಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿಯಲ್ಲಿ ಒಟ್ಟು 340 ಕ್ವಿಂಟಾಲ್ ಅನ್ನಭಾಗ್ಯದ ಅಕ್ಕಿ ಇದ್ದು, ಸುಮಾರು 8.10 ಲಕ್ಷ ರೂಪಾಯಿ ಮೌಲ್ಯದ ಅಕ್ಕಿ ಎಂದು ಅಂದಾಜಿಸಲಾಗಿದೆ. ಈ ಕುರಿತು ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸಿದ್ದು, ತನಿಖೆ ನಡೆದಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ