ಜೆಡಿಎಸ್ ತೊರೆದು ಬಿಜೆಪಿ ಸೇರತ್ತೇನೆ ಎಂದ ಎಂಎಲ್‌ ಸಿ ಸಂದೇಶ ನಾಗರಾಜ್

ಬೆಂಗಳೂರು : ಜಾತ್ಯಾತೀತ ಜನತಾ ದಳವನ್ನು ಒಬ್ಬೊಬ್ಬರೇ ತೊರೆಯುತ್ತಿದ್ದು, ಈಗ ವಿಧಾನ ಪರಿಷತ್ ಸದಸ್ಯ, ಚಲನಚಿತ್ರ ನಿರ್ಮಾಪಕ ಸಂದೇಶ್ ನಾಗರಾಜ್ ಪಕ್ಷ ತೊರೆದು ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ.
ಮೈಸೂರು-ಚಾಮರಾಜನಗರ ಸ್ಥಳೀಯ ಸಂಸ್ಥೆ ಕ್ಷೇತ್ರದಿಂದ ಜೆಡಿಎಸ್‌ನಿಂದ ಗೆದ್ದು ಪರಿಷತ್‌ ಸದಸ್ಯರಾಗಿರುವ ಸಂದೇಶ್‌ ನಾಗರಾಜ್‌ ಅವರು ಅವಧಿ ಮುಗಿಯುವವರೆಗೂ (ಡಿಸೆಂಬರ್‌) ಪಕ್ಷದಲ್ಲೇ ಮುಂದುವರಿಯಲಿದ್ದಾರೆ. ನಂತರ ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ.
ಬಿಜೆಪಿ ಕಚೇರಿಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂದೇಶ್ ನಾಗರಾಜ್ , ಜನವರಿ 5 ರ ವರೆಗೆ ನಾನು ಜೆಡಿಎಸ್ ನಲ್ಲಿ ಉಳಿಯುತ್ತೇನೆ, ಆ ಬಳಿಕ ಬಿಜೆಪಿ ಸೇರುತ್ತೇನೆ ಎಂದು ಹೇಳಿದ್ದಾರೆ.
ನಾನು ಕಳೆದ ಒಂದೂವರೆ ವರ್ಷದಿಂದ ಜೆಡಿಎಸ್‌ ಸಂಪರ್ಕದಲ್ಲಿ ಇಲ್ಲ. ಪರಿಷತ್‌ನಲ್ಲಿ ಅವಧಿ ಮುಗಿಯುವವರೆಗೂ ಜೆಡಿಎಸ್‌ನಲ್ಲೇ ಇರುತ್ತೇನೆ. ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಟ್ಟಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಅವರ ಸಲಹೆಯಂತೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.
ಅಲ್ಲದೆ, ಮೂರನೇ ಬಾರಿ ಚಾಮರಾಜನಗರ-  ಮೈಸೂರು ಸ್ಥಳೀಯ ಸಂಸ್ಥೆಗಳಿಂದ ಸ್ಪರ್ಧಿಸುವುದಾಗಿ ತಿಳಿಸಿದರು.
ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣಕುಮಾರ್ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಸಚಿವ ಭೈರತಿ ಬಸವರಾಜು ಮತ್ತು ಪರಿಷತ್ ಸದಸ್ಯ ಪುಟ್ಟಣ್ಣ ಇದ್ದರು.
ಎಚ್.ಡಿ.ಕುಮಾರ ಸ್ವಾಮಿ ವಿರುದ್ಧ ಮುನಿಸಿಕೊಂಡಿದ್ದ ಸಂದೇಶ್ ನಾಗರಾಜ್ ಅವರು ಕಳೆದ ಒಂದೂವರೆ ವರ್ಷದಿಂದ ಜೆಡಿಎಸ್ ನಿಂದ ದೂರವೇ ಉಳಿದಿದ್ದರು.

ಪ್ರಮುಖ ಸುದ್ದಿ :-   ಮಂಗಳೂರಲ್ಲಿ ಅಭೂತಪೂರ್ವ ರೋಡ್ ಶೋ : ಕರಾವಳಿ ಜನರ ಬಗ್ಗೆ ಪ್ರಧಾನಿ ಮೋದಿ ಟ್ವೀಟ್‌

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement