ನೂತನ ವಿಜಯನಗರ ಜಿಲ್ಲೆಗೆ ಮೊದಲ ಜಿಲ್ಲಾಧಿಕಾರಿ, ಎಸ್ಪಿ ನೇಮಕ

posted in: ರಾಜ್ಯ | 0

ಹೊಸಪೇಟೆ:ಕರ್ನಾಟಕದ 31ನೇ ಜಿಲ್ಲೆಯಾದ ವಿಜಯನಗರಕ್ಕೆ ಮೊದಲ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇಮಕಗೊಂಡಿದ್ದಾರೆ. ಅಕ್ಟೋಬರ್ 2ರಂದು ಅಧಿಕೃತವಾಗಿ ವಿಜಯನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.
ಗುರುವಾರ ನೂತನ ವಿಜಯನಗರ ಜಿಲ್ಲೆಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ನೇಮಕ ಮಾಡಿ ಗುರುವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಅನಿರುದ್ಧ್ ಶ್ರವಣ್ ಜಿಲ್ಲಾಧಿಕಾರಿಯಾಗಿ ಮತ್ತು ಡಾ. ಅರುಣ್ ಕೆ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.
ನೂತನ ವಿಜಯನಗರ ಜಿಲ್ಲೆಯ ಪ್ರಥಮ ಜಿಲ್ಲಾಧಿಕಾರಿಯಾಗಿ ಅನಿರುದ್ಧ್ ಶ್ರವಣ್ ನೇಮಕ ಮಾಡಲಾಗಿದೆ. ಮೊದಲು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್‌ ಇಲಾಖೆ ಆಯುಕ್ತರಾಗಿ ಅನಿರುದ್ಧ್ ಶ್ರವಣ್ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ವಿಜಯನಗರ ಜಿಲ್ಲೆಯ ರಚನೆ ಬಳಿಕ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಕರ್ನಾಟಕ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಎಸ್ಪಿಯಾಗಿ ಐಪಿಎಸ್ ಅಧಿಕಾರಿ ಡಾ. ಅರುಣ್ ಕೆ ನೇಮಕ ಮಾಡಲಾಗಿದೆ. ಇವರು ಈ ಮೊದಲು ಭದ್ರತಾ ಮತ್ತು ಜಾಗೃತ ದಳದ ಎಸ್ಪಿ ಹಾಗೂ ನಿರ್ದೇಶಕರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. 2014ನೇ ಐಪಿಎಸ್ ಅಧಿಕಾರಿಯಾಗಿದ್ದಾರೆ.

.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ