ಮುಂಬೈ : ಚಿರತೆಯೊಂದಿಗೆ ಹೋರಾಡಿ ಗೆದ್ದ ವೃದ್ಧ ಮಹಿಳೆ…! ದೃಶ್ಯ ಸಿಸಿಟಿವಿಯಲ್ಲಿ ಸೆರೆ…ವೀಕ್ಷಿಸಿ

ಮುಂಬೈ: ಗೋರೆಗಾಂವದ ಆರೆ ಮಿಲ್ಕ್ ಕಾಲೋನಿಯಲ್ಲಿ ಬುಧವಾರ ಸಂಜೆ 7: 45 ರ ಸುಮಾರಿಗೆ ವೃದ್ಧ ಮಹಿಳೆಯ ಮೇಲೆ ಚಿರತೆ ದಾಳಿ ಮಾಡಿದೆ.
60 ವರ್ಷದ ಮಹಿಳೆ ನಿರ್ಮಲಾದೇವಿ ಸಿಂಗ್ ತನ್ನ ಮನೆಯ ಬಾಗಿಲ ಹತ್ತಿರದ ಕಟ್ಟೆಯ ಕುಳಿತಿದ್ದಾಗ ಚಿರತೆ ಹಿಂದಿನಿಂದ ದಾಳಿ ಮಾಡಿದೆ. ಈ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮರಾ ಘಟನೆಯನ್ನು ರೆಕಾರ್ಡ್ ಮಾಡಿದ್ದು, ವಿಡಿಯೋ ಈಗ ವೈರಲ್ ಆಗಿದೆ. ಮಹಿಳೆಗೆ ವೈದ್ಯಕೀಯ ನೆರವು ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಚಿರತೆ ತನ್ನ ಮೇಲೆ ಎರಗಿದ ತಕ್ಷಣವೇ ಅದನ್ನು ಎದುರಿಸಿದ ನಿರ್ಮಲಾದೇವಿ ತನ್ನ ವಾಕಿಂಗ್ ಸ್ಟಿಕ್‌ನಿಂದ ಚಿರತೆಯನ್ನು ಹೊಡೆದು ತಪ್ಪಿಸಿಕೊಂಡಿದ್ದಾರೆ. ವಾಕಿಂಗ್ ಸ್ಟಿಕ್‌ನಿಂದ ಅವರು ತಮ್ಮನ್ನು ರಕ್ಷಿಸಿಕೊಂಡ ನಂತರ ಅವರು ಕೂಗಿದ್ದಕ್ಕೆ ಮಹಿಳೆಯ ಕುಟುಂಬದ ಸದಸ್ಯರು ಹಾಗೂ ನೆರೆಹೊರೆಯವರು ಕುಟುಂಬದ ಇತರ ಸದಸ್ಯರು ಸಹಾಯ ಮಾಡಲು ಧಾವಿಸಿದ್ದನ್ನು ನೋಡಿ ಚಿರತೆ ಸ್ಥಳದಿಂದ ಪರಾರಿಯಾಗಿದೆ
ವರದಿಗಳ ಪ್ರಕಾರ, ಮಹಿಳೆಯ ಮುಖ, ಮೊಣಕೈ, ತೋಳು, ಬೆನ್ನು ಮತ್ತು ಕಾಲಿನ ಮೇಲೆ ಬಿದ್ದಿದ್ದು ಹಾಗೂ ಚಿರತೆಯ ಉಗುರಿನಿಂದ ಸಣ್ಣಪುಟ್ಟ ಗಾಯಗಳಾಗಿವೆ. ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನದ ಗಡಿಯಲ್ಲಿರುವ ಈ ಪ್ರದೇಶದಲ್ಲಿ ಇದು ಚಿರತೆ ದಾಳಿಯ ಮೂರನೇ ಘಟನೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾನುವಾರ ಮುಂಜಾನೆ, ನಾಲ್ಕು ವರ್ಷದ ಬಾಲಕನನ್ನು ಚಿರತೆ ತನ್ನ ಮನೆಯ ಸಮೀಪದಿಂದ ಎಳೆಯಲು ಪ್ರಯತ್ನಿಸಿದಾಗ ಸ್ಥಳೀಯರು ಆತನನ್ನು ರಕ್ಷಿಸಿದ್ದಾರೆ. ಅದಕ್ಕೂ ಮುನ್ನ ಮೂರು ವರ್ಷದ ಬಾಲಕನ ಮೇಲೆ ಚಿರತೆ ದಾಳಿ ಮಾಡಿತ್ತು.

ಇಂದಿನ ಪ್ರಮುಖ ಸುದ್ದಿ :-   ದೇಶದಲ್ಲಿದ್ದ 'ಗ್ರಹಿಕೆ ರಾಜಕಾರಣ'ವನ್ನು ʼಕಾರ್ಯನಿರ್ವಹಣೆ ರಾಜಕಾರಣʼವನ್ನಾಗಿ ಬದಲಾಯಿಸಿದ್ದು ಬಿಜೆಪಿ ಸರ್ಕಾರ: ಪ್ರಧಾನಿ ಮೋದಿ ಪ್ರತಿಪಾದನೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement