ಶಿರಸಿ-ಕುಮಟಾದಲ್ಲಿ ಇಎಸ್‌ಐ ಡಿಸ್ಪೆನ್ಸರಿ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ

posted in: ರಾಜ್ಯ | 0

ಶಿರಸಿ: ಉತ್ತರ ಕನ್ನಡ ಜಿಲ್ಲೆಯ  ಶಿರಸಿ ಹಾಗೂ ಕುಮಟಾದಲ್ಲಿ ಇಎಸ್‌ಐ ಚಿಕಿತ್ಸಾಲಯ (ESI Dispensary)ಗಳ ಸ್ಥಾಪನೆಗೆ ಕೇಂದ್ರ ಕಾರ್ಮಿಕ ಸಚಿವಾಲಯ ತಾತ್ವಿಕ ಒಪ್ಪಿಗೆ ನೀಡಿದೆ.
ಈ ಕುರಿತು ಕೇಂದ್ರ ಸಚಿವ ಭೂಪೇಂದ್ರ ಯಾದವ್‌ ಅವರು ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಪತ್ರ ಬರೆದಿದ್ದು, ಶಿರಸಿ ಹಾಗೂ ಕುಮಟಾದಲ್ಲಿಇಎಸ್‌ಐ ಚಿಕಿತ್ಸಾಲಯ (ESI Dispensary)ಗಳ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ ನೀಡಿರುವ ಬಗ್ಗೆ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಸಂಸದ ಅನಂತಕುಮಾರ ಹೆಗಡೆ ಈ ಕುರಿತು ಕೇಂದ್ರ ಸಚಿವ ಭುಪೇಂದ್ರ ಯಾದವ್‌ ಅವರಿಗೆ ಪತ್ರ ಬರೆದಿದ್ದರು ಹಾಗೂ ರಾಜ್ಯ ಸರ್ಕಾರವೂ  ಶಿರಸಿ ಮತ್ತು ಕುಮಟಾದಲ್ಲಿ ಇಎಸ್‌ಐ ಡಿಸ್ಪೆನ್ಸರಿ ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಈಗ  ಗ್ರೀನ್‌ ಸಿಗ್ನಲ್‌ ನೀಡಿದ್ದು, ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮತ್ತು ಕುಮಟಾದಲ್ಲಿ ಇಎಸ್‌ಐ ಚಿಕಿತ್ಸಾಲಯಕ್ಕೆ ತಾತ್ವಿಕ ಒಪ್ಪಿಗೆ ನೀಡಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ