ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೊಸ ಪಕ್ಷ ಕಟ್ಟುವ ಸಾಧ್ಯತೆ, ಹತ್ತಾರು ಪಂಜಾಬ್ ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ

ನವದೆಹಲಿ: ಪಂಜಾಬ್ ನಲ್ಲಿ ನಡೆಯುತ್ತಿರುವ ಅಧಿಕಾರದ ಜಗಳದ ನಡುವೆ, ಕ್ಯಾಪ್ಟನ್ ಅಮರಿಂದರ್ ಸಿಂಗ್ (Capt Amarinder Singh)  ಮುಂದಿನ ಹದಿನೈದು ದಿನಗಳಲ್ಲಿ ಹೊಸ ರಾಜಕೀಯ ಪಕ್ಷ ಕಟ್ಟಬಹುದು (may float new party) ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ಸುಮಾರು ಒಂದು ಡಜನ್ ಕಾಂಗ್ರೆಸ್ ನಾಯಕರು ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ, ಅವರು ಮುಂದಿನ ಕ್ರಮದ ಬಗ್ಗೆ ತಮ್ಮ ಬೆಂಬಲಿಗರೊಂದಿಗೆ ಸಮಾಲೋಚಿಸುತ್ತಿದ್ದಾರೆ. ಅಮರಿಂದರ್ ಸಿಂಗ್ ಪಂಜಾಬ್‌ನ ಕೆಲವು ರೈತ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ ಎಂದು ಇಂಡಿಯಾ ಟುಡೆ ವರರದಿ ಮಾಡಿದೆ.
ಬುಧವಾರ, ಅಮರಿಂದರ್ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿದರು, ಅವರು ಪಂಜಾಬ್ ಮುಖ್ಯಮಂತ್ರಿಯಾಗಿ ನಿರ್ಗಮಿಸಿದ ನಂತರ ಅವರು ಬಿಜೆಪಿ ಸೇರುವ ಊಹಾಪೋಹಗಳಿಗೆ ಕಾರಣರಾದರು. ಆದರೆ, ಗುರುವಾರ, ಅಮರಿಂದರ್ ಸಿಂಗ್ ಅವರು ತಾವು ಬಿಜೆಪಿ ಸೇರುವುದಿಲ್ಲ, ಆದರೆ ಕಾಂಗ್ರೆಸ್ಸಿನಲ್ಲಿಯೂ ಉಳಿಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅಮಿತ್ ಶಾ ಅವರೊಂದಿಗಿನ ನಿರ್ಣಾಯಕ ಭೇಟಿಯಿಂದ ಹೊರಬಂದ ಅಮರೀಂದರ್ ಸಿಂಗ್ ಅವರು ಕೇಂದ್ರ ಸಚಿವರೊಂದಿಗೆ ಕೃಷಿ ಕಾನೂನು ಸಮಸ್ಯೆಗಳ ಬಗ್ಗೆ ಚರ್ಚಿಸಲು ತಾನು ಬಂದಿರುವುದಾಗಿ ತಿಳಿಸಿದರು.
ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ನವಜೋತ್ ಸಿಂಗ್ ಸಿಧು ಗೆಲ್ಲದಂತೆ ನೋಡಿಕೊಳ್ಳುವುದಾಗಿ ಹೇಳಿದ ಅಮರಿಂದರ್ ಸಿಂಗ್ ಇನ್ನು ಮುಂದೆ ತಾನು ಕಾಂಗ್ರೆಸ್ ಪಕ್ಷದ ಭಾಗವಲ್ಲ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : "ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement