ಮತ್ತೆ ತೈಲೋತ್ಪನ್ನಗಳ ದರ ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿದ ಪೆಟ್ರೋಲಿಯಂ, ಡೀಸೆಲ್‌ ದರಗಳು..!

ಮುಂಬೈ: ದೇಶಾದ್ಯಂತ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದೆ. ಶುಕ್ರವಾರ ಪೆಟ್ರೋಲಿಯಂ ಉತ್ಪನ್ನಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ.
ಶುಕ್ರವಾರ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಮೇಲೆ ಸರಾಸರಿ 25 ರಿಂದ 30 ಪೈಸೆ ಹೆಚ್ಚಳವಾಗಿದೆ. ಕಳೆದ ಸೆ.5ರಂದು ಪೆಟ್ರೋಲ್ , ಡೀಸೆಲ್ ಬೆಲೆಯಲ್ಲಿ ಸರಾಸರಿ 15 ರಿಂದ 19 ಪೈಸೆಯಷ್ಟು ಇಳಿಕೆಯಾಗಿತ್ತು.
ಸರ್ಕಾರಿ ತೈಲ ಕಂಪನಿಗಳ ಇಂದು (ಅಕ್ಟೋಬರ್ 1) ಪೆಟ್ರೋಲ್, ಡೀಸೆಲ್ ಬೆಲೆಯನ್ನು ಮತ್ತೆ ಏರಿಕೆ ಮಾಡಿದ್ದು, ಇಂದು ಲೀಟರ್ ಪೆಟ್ರೋಲ್ ದರ 22 ರಿಂದ 30 ಪೈಸೆ ಹೆಚ್ಚಳವಾಗಿದೆ. ಹಾಗೂ ಲೀಟರ್ ಡೀಸೆಲ್ ದರ 29 ರಿಂದ 32 ಪೈಸೆ ಹೆಚ್ಚಳವಾಗಿದೆ.
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.44 ರೂ.ಗಳು ಹಾಗೂ ಲೀಟರ್ ಡೀಸೆಲ್ ದರ 95.70 ರೂ.ಗಳಿಗೆ ಏರಿಕೆ ಆಗಿದೆ.
ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ 101.89 ರೂ.ಗಳು ಹಾಗೂ ಲೀಟರ್ ಡೀಸೆಲ್ ದರ 90.17 ರೂ.ಗಳಾಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.95 ರೂ. ಹಾಗೂ ಲೀಟರ್ ಡೀಸೆಲ್ ದರ 97.84 ರೂ.ಗಳಾಗಿವೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.47 ರೂ.ಗಳು ಹಾಗೂ ಲೀಟರ್ ಡಿಸೆಲ್ ದರ 93.27 ರೂ,ಗಳನ್ನು ತಲುಪಿದೆ ಚೆನ್ನೈನಲ್ಲಿ ಪೆಟ್ರೋಲ್ ದರ 99.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.74 ರೂಪಾಯಿಗೆ ಏರಿಕೆ ಆಗಿದೆ.

ಪ್ರಮುಖ ಸುದ್ದಿ :-   ನಟಿ ಸಿದ್ಧಾರ್ಥ- ನಟಿ ಅದಿತಿ ರಾವ್ ಮದುವೆ ಆಗಿಲ್ಲ : ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ; ಸ್ಪಷ್ಟನೆ ನೀಡಿದ ಅದಿತಿ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement