ಸರ್ಕಾರಿ ತೈಲ ಕಂಪನಿಗಳಿಂದ ವಾಣಿಜ್ಯ ಗ್ಯಾಸ್​ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ

ನವದೆಹಲಿ: ಅಕ್ಟೋಬರ್ ಮೊದಲ ದಿನವೇ ಸರ್ಕಾರಿ ತೈಲ ಮಾರುಕಟ್ಟೆ ಕಂಪೆನಿಗಳು ಅಕ್ಟೋಬರ್ 1ರಿಂದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) 19 ಕೇಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 43.5 ರೂಪಾಯಿ ಏರಿಕೆ ಮಾಡಿದೆ.
ದೆಹಲಿಯಲ್ಲಿ 19 ಕೇಜಿ ತೂಕದ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1693 ರೂಪಾಯಿಯಿಂದ 1736.5 ರೂಪಾಯಿಗೆ ಹೆಚ್ಚಳವಾಗಿದೆ. ಆದರೆ ವಸಾಮಾನ್ಯ ಜನರು ಬಳಸುವ 14.2 ಕೇಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿಲ್ಲ. ಅದರ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ದೆಹಲಿಯಲ್ಲಿ 14.2 ಕೇಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 884.50 ರೂಪಾಯಿ ಇದೆ.
19 ಕೇಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಹೊಸ ಬೆಲೆ
ಸರ್ಕಾರಿ ತೈಲ ಕಂಪೆನಿಗಳು 19 ಕೇಜಿ ತೂಕದ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 43.50 ರೂಪಾಯಿ ಮಾಡಿರುವುದರಿಂದ ದೆಹಲಿಯಲ್ಲಿ 1736.5 ರೂಪಾಯಿಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ 1805.5ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ 1685 ರೂಪಾಯಿ ಹಾಗೂ ಚೆನ್ನೈನಲ್ಲಿ ಪ್ರತಿ ಸಿಲಿಂಡರ್​ಗೆ 1867.5 ಆಗಿದೆ.

ಪ್ರಮುಖ ಸುದ್ದಿ :-   ನಟಿ ಸಿದ್ಧಾರ್ಥ- ನಟಿ ಅದಿತಿ ರಾವ್ ಮದುವೆ ಆಗಿಲ್ಲ : ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ; ಸ್ಪಷ್ಟನೆ ನೀಡಿದ ಅದಿತಿ

 

 

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement