ಹೊಸಪೇಟೆಯಲ್ಲಿ ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆ ಉದ್ಘಾಟನೆ

ಹೊಸಪೇಟೆ: ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅದ್ದೂರಿ ಕಾರ್ಯಕ್ರಮದಲ್ಲಿ ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಆರು ತಾಲೂಕುಗಳನ್ನೊಳಗೊಂಡ ನೂತನ ವಿಜಯನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ.
ಈ ಮೊದಲು ಬಳ್ಳಾರಿಗೆ ಸೇರಿದ್ದ ಹೊಸಪೇಟೆ, ಕೂಡ್ಲಿಗಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ಮತ್ತು ಹರಪನಹಳ್ಳಿ ತಾಲ್ಲೂಕುಗಳು ವಿಜಯನಗರ ನೂತನ ಜಿಲ್ಲೆಯಲ್ಲಿ ಇರಲಿವೆ.
ವಿಜಯನಗರ ಜಿಲ್ಲೆಯ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಚಿವ ಆನಂದ್ ಸಿಂಗ್, ಗೋವಿಂದ ಕಾರಜೋಳ, ಡಾ. ಸಿಎನ್ ಅಶ್ವತ್ಥ ನಾರಾಯಣ, ಸಿ ಸಿ ಪಾಟೀಲ್, ಬೈರತಿ ಬಸವರಾಜ ಸೇರಿದಂತೆ ಸಚಿವರು, ಶಾಸಕರು ಹಾಗೂ ವಿವಿಧ ಮಠಾಧೀಶರು ಹಾಜರಾಗಿದ್ದರು.
ಬಳ್ಳಾರಿ ಜಿಲ್ಲೆಯಿಂದ ವಿಭಜನೆ ಮಾಡಿ ವಿಜಯನಗರ ಎಂಬ ಪ್ರತ್ಯೇಕ ಜಿಲ್ಲೆಯನ್ನು ರಚಿಸಬೇಕೆಂಬ ಒತ್ತಾಯ ಹಲವು ವರ್ಷಗಳಿಂದ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಜಿಲ್ಲೆಯನ್ನಾಗಿ ವಿಜಯನಗರವನ್ನು ಘೋಷಿಸಿ ಆದೇಶ ಹೊರಡಿಸಿತ್ತು. ಗಾಂಧಿ ಜಯಂತಿಯ ದಿನವಾದ ಇಂದು ವಿಜಯನಗರ ನೂತನ ಜಿಲ್ಲೆ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.
ಈಗಾಗಲೇ ಐಎಎಸ್ ಅಧಿಕಾರಿ ಅನಿರುದ್ಧ್ ಶ್ರವಣ್ ಅವರನ್ನು ವಿಜಯನಗರ ಜಿಲ್ಲೆಯ ಮೊದಲ ಜಿಲ್ಲಾಧಿಕಾರಿಯಾಗಿ ಮತ್ತು ಎಸ್​ಪಿಯಾಗಿ ಡಾ. ಅರುಣ್​. ಕೆ ಅವರನ್ನು ನೇಮಕ ಮಾಡಲಾಗಿದೆ ಹೊಸ ಸಿಇಒ ಆಗಿ ಕೆ.ಎಂ. ಗಾಯತ್ರಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement