ಬೆಂಗಳೂರಿನಲ್ಲಿ ಮತ್ತೊಂದು ದುರಂತ: ತಾಯಿ-ಇಬ್ಬರು ಮಕ್ಕಳು ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಅಂಥದ್ದೇ ಮತ್ತೊಂದು ದುರಂತದ ಘಟನೆ ನಡೆದಿದೆ.
ಒಂದೇ ಕುಟುಂಬದ ಮೂವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಪ್ರಕೃತಿ ಬಡಾವಣೆಯ ಮನೆಯೊಂದರಲ್ಲಿ ನಡೆದ ಬಗ್ಗೆ ವರದಿಯಾಗಿದೆ. ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡವರು. ವಸಂತಾ(40), ಯಶ್ವಂತ್(15), ನಿಶ್ಚಿತಾ(6) ಆತ್ಮಹತ್ಯೆ ಮಾಡಿಕೊಂಡವರು ಎಂದು ಗರುತಿಸಲಾಗಿದೆ. ತಾಯಿ ಮಗಳು ಒಂದು ರೂಮಿನಲ್ಲಿ ಒಂದೇ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರೆ ಮತ್ತೊಂದು ರೂಮಿನಲ್ಲಿ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮನೆಯಿಂದ ಯಾರೂ ಹೊರಬರುತ್ತಿಲ್ಲ ಎಂದು ಸಂಶಯಗೊಂಡ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.ವರ್ಷದ ಹಿಂದೆಯಷ್ಟೇ ವಸಂತಾ ಅವರ ಪತಿ ಕೊರೊನಾದಿಂದ ಮೃತಪಟ್ಟಿದ್ದರು. ಅಂದಿನಿಂದ ಕುಟುಂಬ ಮಾನಸಿಕವಾಗಿ ನೊಂದಿತ್ತು ಎಂದು ಹೇಳಲಾಗಿದೆ. ಮಾದನಾಯಕನಹಳ್ಳಿ ಪೊಲೀಸರು ತನಿಖೆ ನಡೆಸಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement