ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 664 ಜನರಿಗೆ ಕೊರೊನಾ ದೃಢ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಭಾನುವಾರ (ಅಕ್ಟೋಬರ್ 3) ಹೊಸದಾಗಿ 664 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,77,889 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇದೇ ಸಮಯದಲ್ಲಿ ಕೊರೊನಾ ಸೋಂಕಿನಿಂದ 8 ಜನರು ಮೃತಪಟ್ಟಿದ್ದಾರೆ
ಸೋಂಕಿತರ ಪೈಕಿ 29,27,740 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,819 ಜನ ಮೃತಪಟ್ಟಿದ್ದಾರೆ ಹಾಗೂ ರಾಜ್ಯದಲ್ಲಿ 12,301 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಈವರೆಗೆ ಒಟ್ಟು 29,27,740 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 196 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ 7,600 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ಮಾಹಿತಿ
ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 8, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 196, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 13, ಚಿತ್ರದುರ್ಗ 12, ದಕ್ಷಿಣ ಕನ್ನಡ 76, ದಾವಣಗೆರೆ 4, ಧಾರವಾಡ 9, ಗದಗ 0, ಹಾಸನ 45, ಹಾವೇರಿ 1, ಕಲಬುರಗಿ 0, ಕೊಡಗು 52, ಕೋಲಾರ 13, ಕೊಪ್ಪಳ 2, ಮಂಡ್ಯ 8, ಮೈಸೂರು 101, ರಾಯಚೂರು 0, ರಾಮನಗರ 1, ಶಿವಮೊಗ್ಗ 11, ತುಮಕೂರು 18, ಉಡುಪಿ 33, ಉತ್ತರ ಕನ್ನಡ 43, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 2 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ